

ಲಖನೌ: ರಾಜ್ಯದ ಮದರಸಾಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ) ಶಿಕ್ಷಣ ನೀಡಲು ಉತ್ತರ ಪ್ರದೇಶ ಸರ್ಕಾರ ಪೈಲಟ್ ಯೋಜನೆಯೊಂದನ್ನು ರೂಪಿಸಿದೆ. ಉದಯೋನ್ಮುಖ ತಂತ್ರಜ್ಞಾನದಲ್ಲಿ ತರಬೇತಿ ನೀಡುವುದು ಹಾಗೂ ಮದರಸಾಗಳು ಮುಖ್ಯವಾಹಿನಿಯ ಶೈಕ್ಷಣಿಕ ವ್ಯವಸ್ಥೆಯಲ್ಲಿ ಬೆರೆಯುವಂತೆ ಮಾಡುವುದು ಇದರ ಗುರಿಯಾಗಿದೆ ಎಂದು ಶಿಕ್ಷಣ ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ ಹೇಳಿದ್ದಾರೆ.
ಒಂದು ವೇಳೆ ಈ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದರೆ ಶಾಲೆಗಳಲ್ಲಿ ಮಾನವ ಸಂಪನ್ಮೂಲ ಮುಂತಾದ ವ್ಯವಸ್ಥೆಗಳನ್ನು ಮಾಡಬೇಕಾಗುತ್ತದೆ ಎಂದು ಮದರಸಾ ಶಿಕ್ಷಕರ ಸಂವೊಂದು ಹೇಳಿದೆ.
ಮದರಸಾಗಳಲ್ಲಿ ಅಧ್ಯಯನ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಸಂಟಿತ ಮಾದರಿಗಳ ಮೂಲಕ ಎಐ ಕಲಿಸಲಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ. ಎಐ ಕಲಿಕೆ ಸಂಬಂಧ ಅಕ್ಟೋಬರ್ 4ರಂದು ವಿಶೇಷ ಅಭಿಯಾನವೊಂದನ್ನು ಆರಂಭಿಸಲಾಗಿದೆ ಎಂದೂ ಅನ್ಸಾರಿ ತಿಳಿಸಿದ್ದಾರೆ.