More

    8ಕ್ಕೂ ಹೆಚ್ಚು ಬಾರಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದ ವ್ಯಕ್ತಿ; ವಿಡಿಯೋ ವೈರಲ್

    ಲಖನೌ: ದೇಶದಲ್ಲಿ ಇಂದು (ಮೇ 20) ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನದ ನಡೆಯುತ್ತಿದ್ದು, ಒಟ್ಟು 49 ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಆದರೆ, ಉತ್ತರಪ್ರದೇಶದಲ್ಲಿ 8ಕ್ಕೂ ಹೆಚ್ಚು ಬಾರಿ ಮತ ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ.

    ಬಂಧಿತನನ್ನು ರಾಜನ್​ ಸಿಂಗ್​ ಎಂದು ಗುರುತಿಸಲಾಗಿದ್ದು, ಈತ ಮತ ಚಲಾಯಿಸುತ್ತಿರುವ ವಿಡಿಯೋ ಹಾಗೂ ಕೈ ಬೆರಳಿಗೆ ಶಾಹಿ ಹಾಕಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಬಳಿಕ ದೂರನ್ನು ದಾಖಲಿಸಿಕೊಂಡು ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

    ಇದನ್ನೂ ಓದಿ: ಅಪಘಾತದಲ್ಲಿ ಇಬ್ಬರನ್ನು ಕೊಂದ ಅಪ್ರಾಪ್ತನಿಗೆ ವಿಚಿತ್ರ ಶಿಕ್ಷೆ; ಆಕ್ಸಿಡೆಂಟ್​ ಬಗ್ಗೆ ಪ್ರಬಂಧ, ಪೊಲೀಸರ ಜತೆ ಕೆಲಸ… ಇದೊಂದು ಶಿಕ್ಷೆನಾ?

    ಎರಡು ನಿಮಿಷಗಳ ವಿಡಿಯೋವನ್ನು ನೋಡುವುದಾದರೆ ವ್ಯಕ್ತಿಯು ಫರೂಕಾಬಾದ್​ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್​ ರಜಪೂತ್​ಗೆ 8ಕ್ಕೂ ಹೆಚ್ಚು ಬಾರಿ ಮತ ಚಲಾಯಿಸುವುದನ್ನು ನೋಡಬಹುದಾಗಿದೆ. ಈ ವಿಡಿಯೋ ವೈರಲ್​ ಆದ ಬಳಿಕ ARO ಪ್ರತೀಶ್​ ತ್ರಿಪಾಠಿ ನೀಡಿದ ದೂರನ್ನು ಆಧರಿಸಿ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

    ಬಂಧಿತ ವ್ಯಕ್ತಿ ವಿರುದ್ಧ ಐಪಿಸಿ ಸೆಕ್ಷನ್​ 128, 132, 136, 419ರ ಅಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೆ ಒಳಪಡಿಸಲಾಗಿದೆ. ವಿಡಿಯೋ ಸಂಬಂಧ ತ್ವರಿತ ಮತ್ತು ಪರಿಣಾಮಕಾರಿ ಕ್ರಮವನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಈ ವೇಳೆ ಮತಗಟ್ಟೆಯಲ್ಲಿದ್ದ ಅಧಿಕಾರಿಗಳನ್ನು ಸೇವೆಯನ್ನು ಅಮಾನತುಗೊಳಿಸುವಂತೆ ಆದೇಶಿಸಲಾಗಿದೆ ಎಂದು ಉತ್ತರಪ್ರದೇಶ ರಾಜ್ಯ ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.

    See also  ದೀಪಾವಳಿಗೆ ಭೀಮ ಪಟಾಕಿ?; ಭರದಿಂದ ಸಾಗಿದೆ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts