ಆಸ್ತಿಗಾಗಿ ತಂದಗೆ ಸುತ್ತಿಗೆಯಿಂದ ಹೊಡೆದ; ದೇಹವನ್ನು ಕತ್ತರಿಸಿ ಸೂಟ್‌ಕೇಸ್‌ಗೆ ತುಂಬಿ ಎಸೆದ ಮಗ

suitcase
Published on

ಉತ್ತರಪ್ರದೇಶ: ಮಗನೋರ್ವ ತಂದೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದು ದೇಹವನ್ನು ತುಂಡುತುಂಡಾಗಿ ಕತ್ತರಿಸಿ ಸೂಟ್‌ಕೇಸ್‌ಗೆ ತುಂಬಿ ಎಸೆದಿರುವ ಘಟನೆ ಉತ್ತರಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ.

ಮುರಳಿ ಧಾರ್ ಗುಪ್ತಾ ಮೃತ. ಕೊಲೆ ಮಾಡಿದ ಆರೋಪಿಯನ್ನು ಸಂತೋಷ್ ಕುಮಾರ್ ಆಲಿಯಾಸ್ ಪ್ರಿನ್ಸ್ ಎಂದು ಗುರುತಿಸಲಾಗಿದೆ. 30 ವರ್ಷದ ಮಗ ತನ್ನ 62 ವರ್ಷದ ಅಪ್ಪನನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಪ್ಪ ಮಗನ ಮಧ್ಯೆ ವಾದ ವಿವಾದವೇರ್ಪಟ್ಟಿದೆ. ಈ ಮಾತಿನ ಕಲಹವೇ ವಿಕೋಪಕ್ಕೆ ತಿರುಗಿದ್ದು, ಕುಪಿತಗೊಂಡ ಮಗ ಅಪ್ಪನನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ನಂತರ ತನ್ನ ತಂದೆಯ ದೇಹವನ್ನು ಕತ್ತರಿಸಿ ತುಂಡು ತುಂಡುಗಳಾಗಿ ಮಾಡಿ ಅದನ್ನು ಸೂಟ್‌ಕೇಸ್‌ನಲ್ಲಿ ತುಂಬಿ ದೂರ ಎಸೆದಿದ್ದಾನೆ. ತಿವಾರಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಸೂರಜ್‌ ಕುಂಡ್ ಕಾಲೋನಿಯಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.

ಭಾನುವಾರ ಆರೋಪಿಯ ಸಹೋದರ ಪ್ರಶಾಂತ್ ಗುಪ್ತಾ ಎಂಬುವವರು ದೂರು ನೀಡಿದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂತೋಷ್ ಕುಮಾರ್​​ನನ್ನು ಬಂಧಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ನಗರ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಕೃಷ್ಣ ಕುಮಾರ್ ಬಿಷ್ನೋಯಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net