More

    ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ದುಡುಕಿನ ನಿರ್ಧಾರ ತೆಗೆದುಕೊಂಡ ಪತಿ

    ಮುಜಾಫರ್​ನಗರ: ಪ್ರೀತಿಯ ಮಡದಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದ ವ್ಯಕ್ತಿಯೊಬ್ಬ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲಿಯಲ್ಲಿ ನಡೆದಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

    ಶನಿವಾರ ರಾತ್ರಿ ಬಾಬ್ರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬರುವ ಸೊಂಟಾ ಗ್ರಾಮದಲ್ಲಿ ಘಟನೆ ನಡೆದಿದೆ.

    ಇದನ್ನೂ ಓದಿ: ಎಷ್ಟು ನಿಮಿಷಗಳಲ್ಲಿ ಕರೊನಾ ಹರಡುತ್ತೆ? ಕೆಮ್ಮಿದಾಗ ಬರುವ ವೈರಸ್​ ಕಣಗಳೆಷ್ಟು?: ಇಲ್ಲಿದ ಆಘಾತಕಾರಿ ಮಾಹಿತಿ

    ಮೃತ ವ್ಯಕ್ತಿಯನ್ನು ಬಲೆಂದರ್​ ಸಿಂಗ್​ (40) ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ದಂಪತಿ ನಡುವೆ ವಾಗ್ವಾದ ನಡೆದಿತ್ತು. ಇದರಿಂದ ಬೇಸತ್ತು ಮಕ್ಕಳನ್ನು ಕರೆದುಕೊಂಡು ಮಡದಿ ತವರು ಮನೆಗೆ ತೆರಳಿದ್ದಳು.

    ಪತ್ನಿ ಹೋದಳಲ್ಲ ಎಂಬ ದುಃಖದಲ್ಲಿ ದೇಶಿ ನಿರ್ಮಿತ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಪ್ರಾಣ ಬಿಟ್ಟಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. (ಏಜೆನ್ಸೀಸ್​)

    ಪಿಎಂಸಿ ಬ್ಯಾಂಕ್ ಹಗರಣದ ಆರೋಪಿ ರಾಕೇಶ್​​ಗೆ ಕೋವಿಡ್ ದೃಢ; ಸಂಬಂಧಿಕರು ಗದ್ದಲ ಸೃಷ್ಟಿಸಿದ್ದೇಕೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts