ದೊಡ್ಡ ಕಾರ್ಯಕ್ರಮಗಳಲ್ಲಿ ಸಣ್ಣ ಘಟನೆಗಳು ಸಾಮಾನ್ಯ; Mahakumbh ಮೇಳದಲ್ಲಿ ಕಾಲ್ತುಳಿತದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ

Sanjay NIshad
Published on

ಲಖನೌ: ಮೌನಿ ಅಮಾವಾಸ್ಯೆಯ ಸಂದರ್ಭದಲ್ಲಿ ಮಹಾಕುಂಭಮೇಳದಲ್ಲಿ (Mahakumbh Mela) ಸಂಭವಿಸಿದ ಕಾಲ್ತುಳಿತದಲ್ಲಿ ಅನೇಕರು ಮಂದಿ ಮೃತಪಟ್ಟಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಇನ್ನೂ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಅದಿತ್ಯನಾಥ್ ಅಧಿಕಾರಿಗಳಿಂ ಕ್ಷಣಕ್ಷಣದ ಮಾಹಿತಿ ಪಡೆಯುತ್ತಿರುವ ನಡುವೆಯೇ ಉತ್ತರಪ್ರದೇಶದ ಸಚಿವರೊಬ್ಬರು ಕಾಲ್ತುಳಿತದ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. 

ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡುವಾಗ ಉತ್ತರಪ್ರದೇಶ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಸಂಜಯ್​ ನಿಶಾದ್ ಈ ಹೇಳಿಕೆಯನ್ನು ನೀಡಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್​ ಆಗಿದೆ.

ಮಹಾಕುಂಭ ಮೇಳವು ಕೋಟ್ಯಂತರ ಭಕ್ತರು ಭೇಟಿ ನೀಡುವ ಒಂದು ದೊಡ್ಡ ಕಾರ್ಯಕ್ರಮವಾಗಿದೆ. ಈ ರೀತಿಯ ದೊಡ್ಡ ಕಾರ್ಯಕ್ರಮಗಳಲ್ಲಿ ಸಣ್ಣ ಘಟನೆಗಳು ಸಂಭವಿಸುತ್ತದೆ. ಮುಖ್ಯಮಂತ್ರಿಗಳು ಖುದ್ದಾಗಿ ಗಮನಿಸುತ್ತಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಸ್ಥಳಾವಕಾಶವಿರುವ ಕಡೆ ಪುಣ್ಯಸ್ನಾನ ಮಾಡಿ, ಘಟನೆ ಕುರಿತು ವದಂತಿಗಳನ್ನು ನಂಬಬೇಡಿ ಎಂದು ಹೇಳಿದ್ದಾರೆ. 

ಇತ್ತ ತಮ್ಮ ಹೇಳಿಕೆಯೂ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ವಿಷಾದ ವ್ಯಕ್ತಪಡಿಸಿರುವ ಸಚಿವ ನಿಶಾದ್​, ಕಾಲ್ತುಳಿತವು ದುರಂತವಾಗಿದ್ದು, ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಪ್ರಸ್ತುತ ಘಟನೆಯಿಂದಾಗಿಯಾರು ವಿಚಲಿತರಾಗದೆ ಎಲ್ಲರೂ ಶಾಂತಿಯನ್ನು ಕಾಪಾಡಬೇಕು ಎಂದು ಸಚಿವ ಸಂಜಯ್​ ನಿಶಾದ್ ಕರೆ ನೀಡಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net