ವರದಕ್ಷಿಣೆಯಾಗಿ ಕಾರು, 10 ಲಕ್ಷ ರೂ. ಕೊಡಲಿಲ್ಲ ಎಂದು ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ!; ಪ್ರಕರಣ ದಾಖಲು

triple talaq case
Published on

ಲಕ್ನೋ: ವರದಕ್ಷಿಣೆಯಾಗಿ 7 ಸೀಟರ್​​ ಕಾರು ಮತ್ತು 10 ಲಕ್ಷ ನಗದು ಕೊಡಲಿಲ್ಲ ಎಂದು ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ತ್ರಿವಳಿ ತಲಾಖ್ ನೀಡಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ಭಾರತದಲ್ಲಿ ತ್ರಿವಳಿ ತಲಾಖ್‌ಗೆ ನಿಷೇಧ ಹೇರಿದ್ದರೂ ಕೂಡ ಇಂಥ ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿದೆ! ಸದ್ಯ ಇದೇ ರೀತಿಯಲ್ಲಿ ಉತ್ತರಪ್ರದೇಶದ ಲಕ್ನೋದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ 7 ಸೀಟರ್​ ಕಾರು ಮತ್ತು 10 ಲಕ್ಷ ರೂಪಾಯಿ ನಗದು ವರದಕ್ಷಿಣೆಯಾಗಿ ನೀಡಲಿಲ್ಲ ಎಂದು ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದಾನೆ. ಸಂತ್ರಸ್ತೆಯ ದೂರಿನ ಆಧಾರದ ಮೇರೆಗೆ ಲಕ್ನೋ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ.

ಸಂತ್ರಸ್ತೆ ಮತ್ತು ಆರೋಪಿಯನ್ನು ಫರ್ಹೀನ್ ಮತ್ತು ಫೈಸಲ್ ಹಸನ್ ಎಂದು ಗುರುತಿಸಲಾಗಿದ್ದು, ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯಿದೆ, 2019ರ ಅಡಿಯಲ್ಲಿ ಈ ಪ್ರಕರಣವನ್ನು ಲಕ್ನೋ ಪೊಲೀಸರು ದಾಖಲಿಸಿಕೊಂಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net