ಕಾನ್ಪುರ: ಸಾಮಾಜಿಕ ಜಾಲತಾಣದ ಯುಗದಲ್ಲಿ ಯುವ ಪೀಳಿಗೆಯೂ ಒಂದಿಲ್ಲೊಂದು ಕೆಲಸಕ್ಕೆ ಕೈ ಹಾಕಿ ಪೇಚಿಗೆ ಸಿಲುಕುತ್ತಾರೆ. ಪೊಲೀಸರು ಇದಕ್ಕೆ ಸಂಬಂಧಿಸಿದಂತೆ ಕ್ರಮ ಜರುಗಿಸಿದರು ದಿನದಿಂದ ದಿನಕ್ಕೆ ಈ ರೀತಿಯ ಪ್ರಕರಣಗಳು ದಾಖಲಾಗುತ್ತಿರುತ್ತವೆ. ಇದೀಗ ಇದಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದ್ದು, ನೆಟ್ಟಿಗರು ಕಿಡಿಕಾರಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವೈರಲ್ ಆಗಿರುವ ವಿಡಿಯೋ ನೋಡುವುದಾದರೆ ಬುಲೆಟ್ ಬೈಕ್ನ ಯುವಕನೋರ್ವ ಬೈಕ್ನ ಹಿಂಬದಿ ಸೀಟ್ನಲ್ಲಿ ಕುಳಿತುಕೊಂಡು ಯುವಕನೋರ್ವ ಜನನಿಬಿಡ ರಸ್ತೆಯಲ್ಲಿ ಗನ್ನಿಂದ ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸುತ್ತಾನೆ. ಈತನ ಕೃತ್ಯವನ್ನು ಹಿಂಬದಿ ಬೈಕ್ನಲ್ಲಿ ಬರುತ್ತಿದ್ದ ಆತನ ಸಹಚರರು ಮೊಬೈಲ್ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ.
ಇದನ್ನೂ ಓದಿ: ಸಂತ್ರಸ್ತೆ ಕಿಡ್ನ್ಯಾಪ್ ಕೇಸ್; ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
ಈ ಕುರಿತು ಪ್ರತಿಕ್ರಿಯಿಸಿರುವ ಕಾನ್ಪುರ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಘಟನೆ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ಕೃತ್ಯ ಎಸಗಿದವರನ್ನು ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ. ವಿಡಿಯೋದಲ್ಲಿ ಕಂಡು ಬಂದಿರುವವರ ಹಿನ್ನೆಲೆ ಏನು ಎಂಬುದು ಪರಿಶೀಲಿಸಲಾಗುತ್ತಿದ್ದು, ಶೀಘ್ರದಲ್ಲೇ ಬಂಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕಾನ್ಪುರ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತ ವಿಡಿಯೋ ವೈರಲ್ ಆಗುತ್ತಿದ್ದಂತೆ ಕಿಡಿಕಾರಿರುವ ನೆಟ್ಟಿಗರು ಈ ಪ್ರಕರಣವು ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ ಎಂದು ವಿಪಕ್ಷ ನಾಯಕರು ಕಿಡಿಕಾರಿದ್ದಾರೆ.