ಜನರಲ್ಲಿ ಜಾಗೃತಿ ಮೂಡಿಸಲು ‘ಜವಾನ್’ ಸಿನಿಮಾದ ಪೋಸ್ಟರ್​ ಬಳಕೆ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

hel
Published on

ಶಾರುಖ್ ಖಾನ್ ನಟನೆಯ ಸೂಪರ್ ಹಿಟ್ ಸಿನಿಮಾ ‘ಜವಾನ್’ ಚಿತ್ರದ ಪೋಸ್ಟರ್ ಬಳಕೆ ಮಾಡಿಕೊಂಡು ಜನರಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗುತ್ತಿದೆ.


ಸೂಪರ್ ಹಿಟ್ ಸಿನಿಮಾ ಆದರೂ ಅದನ್ನು ಕೆಲವರು ಜಾಹೀರಾತಿಗೆ ಬಳಕೆ ಮಾಡಿಕೊಳ್ಳುತ್ತಾರೆ. ಅದರಲ್ಲೂ ದೆಹಲಿ ಪೊಲೀಸರು ಈ ವಿಚಾರದಲ್ಲಿ ಮುಂದಿದ್ದಾರೆ. ಸೂಪರ್ ಹಿಟ್ ಸಿನಿಮಾಗಳ ದೃಶ್ಯ ಹಾಗೂ ಪೋಸ್ಟರ್ ಬಳಕೆ ಮಾಡಿಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಾರೆ. ಈಗ ಶಾರುಖ್ ಖಾನ್ ನಟನೆಯ ಸೂಪರ್ ಹಿಟ್ ಸಿನಿಮಾ ‘ಜವಾನ್’ ಚಿತ್ರದ ಪೋಸ್ಟರ್ ಬಳಕೆ ಮಾಡಿಕೊಂಡು ಜನರಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗುತ್ತಿದೆ.


‘ಸಣ್ಣವರಾಗಿರಲಿ, ಯುವಕರಾಗಿರಲಿ ಅಥವಾ ದೊಡ್ಡವರೇ ಆಗಿರಲಿ ಹೆಲ್ಮೆಟ್ ಜೀವ ಉಳಿಸುತ್ತದೆ’ ಎಂದು ಬರೆಯಲಾಗಿದೆ. ಈ ಮೂಲಕ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದೆ.


ದೆಹಲಿ ಪೊಲೀಸ್ ಟ್ವಿಟರ್ ಖಾತೆಯಿಂದ ಪೋಸ್ಟ್ ಒಂದನ್ನು ಮಾಡಲಾಗಿದೆ. ಶಾರುಖ್ ಖಾನ್ ಮುಖಕ್ಕೆ ಬ್ಯಾಂಡೇಜ್ ಸುತ್ತಿರೋ ಫೋಟೋ ಇದರಲ್ಲಿದೆ.
ಶಾರುಖ್ ಖಾನ್ ತಲೆಗೆ ಬ್ಯಾಂಡೇಜ್ ಕಟ್ಟಿರುವ ಫೋಟೋ ಒಂದು ಕಡೆ ಇದ್ದರೆ ಮತ್ತೊಂದು ಕಡೆ ಹೆಲ್ಮೆಟ್ ಫೋಟೋ ಇದೆ. ‘ಈ ರೀತಿ ಬ್ಯಾಂಡೇಜ್ ಕಟ್ಟಿಕೊಳ್ಳುವುದನ್ನು ತಪ್ಪಿಸಿಕೊಳ್ಳಬೇಕು ಎಂದರೆ ಹೆಲ್ಮೆಟ್ ಧರಿಸಿ’ ಎಂಬರ್ಥದಲ್ಲಿ ಉತ್ತರ ಪ್ರದೇಶ ಪೊಲೀಸರು ಟ್ವೀಟ್ ಮಾಡಿದ್ದಾರೆ. ಸದ್ಯ ಈ ಪೋಸ್ಟರ್ ವೈರಲ್ ಆಗುತ್ತಿದೆ.


ಶಾರುಖ್ ಖಾನ್ ಓರ್ವ ಸೂಪರ್ ಸ್ಟಾರ್ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಭಾನುವಾರ ಈ ಚಿತ್ರ 80+ ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದ ಭಾರತದ ಗಳಿಕೆ 287 ಕೋಟಿ ರೂಪಾಯಿ ಆಗಿದೆ. ವಿಶ್ವಾದ್ಯಂತ ಸಿನಿಮಾ 500+ ಕೋಟಿ ರೂಪಾಯಿ ಬಾಚಿಕೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net