ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಮನೆ ಬಾಗಿಲು ತಟ್ಟಿದ ಯುಪಿ ಪೊಲೀಸರು

ನವದೆಹಲಿ: ಹಣ ಕೊಟ್ಟಿದ್ದರೂ ದೆಹಲಿಯಲ್ಲಿ ಪ್ರದರ್ಶನ ನೀಡದೆ ವಂಚಿಸಿದ್ದಾರೆ ಎಂದು ಬಾಲಿವುಡ್ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರ ತಂಡ ನಟಿ ಸೋನಾಕ್ಷಿ ಸಿನ್ಹಾ ಅವರ ಮನೆಗೆ ಭೇಟಿ ನೀಡಿದ್ದಾರೆ.

ದೆಹಲಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಸೋನಾಕ್ಷಿ 24 ಲಕ್ಷ ರೂ. ಪಡೆದಿದ್ದರೂ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ. ಇದರಿಂದ ಕಾರ್ಯಕ್ರಮ ಆಯೋಜಿಸಿದ್ದ ವ್ಯಕ್ತಿ ಸೋನಾಕ್ಷಿ ವಿರುದ್ಧ ದೂರು ದಾಖಲಿಸಿದ್ದರು. ಈ ಸಂಬಂಧ ಉತ್ತರ ಪ್ರದೇಶದ ಮೊರಾದಾಬಾದ್‌ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದರು.

ಈ ಸಂಬಂಧ ಗುರುವಾರ ಗುರುವಾರ ಮುಂಬೈನ ಜುಹು ಪೊಲೀಸ್ ಠಾಣೆಯ ಅಧಿಕಾರಿಗಳ ನೆರವಿನೊಂದಿಗೆ ಉತ್ತರ ಪ್ರದೇಶದ ಪೊಲೀಸರು ಸೋನಾಕ್ಷಿ ಸಿನ್ಹಾರ ನಿವಾಸಕ್ಕೆ ಭೇಟಿ ನೀಡಿ ಆಕೆಯ ವಿರುದ್ಧ ದಾಖಲಾಗಿರುವ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆಯನ್ನು ದಾಖಲಿಸಿಕೊಳ್ಳಲು ತೆರಳಿದ್ದರು. ಆದರೆ, ಪೊಲೀಸರು ಬರುವ ವೇಳೆಯಲ್ಲಿ ಸೋನಾಕ್ಷಿ ಸಿನ್ಹಾ ಮನೆಯಲ್ಲಿರಲಿಲ್ಲ. ಕೆಲ ನಿಮಿಷಗಳು ಕಾದ ಬಳಿಕ ಮತ್ತೆ ಶುಕ್ರವಾರ ಮತ್ತೆ ಭೇಟಿ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸೋನಾಕ್ಷಿ ಸಿನ್ಹಾರ ವಕ್ತಾರ ಆರೋಪಗಳನ್ನು ಅಲ್ಲಗಳೆದಿದ್ದು, ಇದೆಲ್ಲವು ಅವರ ಹೆಸರಿಗೆ ಮಸಿ ಬಳಿಯಲು ಮಾಡಲಾಗಿದೆ ಎಂದು ದೂರಿದ್ದಾರೆ.

ಈ ಬಗ್ಗೆ ಟ್ವೀಟರ್ ನಲ್ಲಿ ಪ್ರತಿಕ್ರಿಯಿಸಿರುವ ಸೋನಾಕ್ಷಿ ಸಿನ್ಹಾ, ಈ ರೀತಿಯ ಆರೋಪಗಳನ್ನು ಮಾಡುವ ಮೂಲಕ ಮಾಧ್ಯಮಗಳಲ್ಲಿ ನನ್ನ ಹೆಸರಿಗೆ ಮಸಿ ಬಳಿಯಬಹುದೆಂದು ಕಾರ್ಯಕ್ರಮದ ಆಯೋಜಕರು ಯೋಚಿಸಿದ್ದಾರೆ. ನನ್ನ ವಿರುದ್ಧ ತನಿಖೆ ಕೈಗೊಂಡಿರುವ ಅಧಿಕಾರಿಗಳಿಗೆ ನಾನು ಸಂಪೂರ್ಣ ಸಹಕಾರವನ್ನು ನೀಡುತ್ತೇನೆ. ಈ ರೀತಿಯ ವಿಚಾರಗಳನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ನಾನು ಬೇಡಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ. (ಏಜೆನ್ಸೀಸ್)

Leave a Reply

Your email address will not be published. Required fields are marked *