More

    ದಿ ಕೇರಳ ಸ್ಟೋರಿ ಸಿನಿಮಾಗೆ ಉತ್ತರ ಪ್ರದೇಶ ಬೆಂಬಲ: ತೆರಿಗೆ ವಿನಾಯಿತಿ ಘೋಷಿಸಿದ ಸರ್ಕಾರ

    ನವದೆಹಲಿ: ಪರ-ವಿರೋಧ ಚರ್ಚೆ ಹುಟ್ಟುಹಾಕಿರುವ ದಿ ಕೇರಳ ಸ್ಟೋರಿ ಸಿನಿಮಾ ಕೆಲವೆಡೆ ನಿಷೇಧದ ನಡುವೆಯೂ ಗಲ್ಲಾಪೆಟ್ಟಿಗೆಯಲ್ಲಿ ಭಾರೀ ಸದ್ದು ಮಾಡುತ್ತಿದೆ. ಪಶ್ಚಿಮ ಬಂಗಾಳ ಸರ್ಕಾರ ಈ ಸಿನಿಮಾವನ್ನು ಬ್ಯಾನ್​ ಮಾಡಿದ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದೆ.

    ಕೇರಳದ 32 ಸಾವಿರಕ್ಕೂ ಅಧಿಕ ಯುವತಿಯರನ್ನು ಮತಾಂತರಿಸಿ, ಐಸಿಸ್ ಪರ ಹೋರಾಡಲು, ಸಿರಿಯಾ, ಇರಾಕ್, ಅಫ್ಘಾನಿಸ್ತಾನ ದೇಶಗಳಿಗೆ ಸಾಗಿಸಲಾಗಿದೆ ಎಂಬ ಸಂಭಾಷಣೆ ಹಲವರ ಅಸಮಾಧಾನಕ್ಕೆ ಕಾರಣವಾಗಿದ್ದು, ಪರ-ವಿರೋಧ ಚರ್ಚೆಯನ್ನು ಹುಟ್ಟುಹಾಕಿದೆ.

    ದಿ ಕೇರಳ ಸ್ಟೋರಿ ಸಿನಿಮಾ ಸಮಾಜದಲ್ಲಿ ಅಶಾಂತಿ ಉಂಟುಮಾಡಬಹುದು ಎಂದು ಹೇಳಿ ಪಶ್ಚಿಮ ಬಂಗಾಳ ಸರ್ಕಾರ ಬ್ಯಾನ್​ ಮಾಡಿದೆ. ಆದರೆ, ಉತ್ತರ ಪ್ರದೇಶ ಸರ್ಕಾರ ಈ ಸಿನಿಮಾಗೆ ತೆರಿಗೆ ವಿನಾಯಿತಿಯನ್ನು ಘೋಷಣೆ ಮಾಡಿದೆ.

    ಇದನ್ನೂ ಓದಿ: ಅತಿವೇಗದಿಂದಾಗಿ ಯೂಟ್ಯೂಬರ್ ದುರಂತ ಸಾವು ಪ್ರಕರಣ: ಯುವಕನ ಕ್ಯಾಮೆರಾ ಬಿಚ್ಚಿಟ್ಟ ರಹಸ್ಯವಿದು…

    ಕೇರಳ ಸಿಎಂ ಪಿಣರಾಯಿ ವಿಜಯನ್, ‘ಇದು ಆರ್​ಎಸ್​ಎಸ್ ಪ್ರೇರಿತ, ಪ್ರಚಾರಕ್ಕಾಗಿ ಮಾಡಿರುವ ಸಿನಿಮಾ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಕೇರಳದ ಕಾಂಗ್ರೆಸ್ ಮುಖಂಡರು ಕೆಲವೆಡೆ ಪ್ರತಿಭಟನೆ ನಡೆಸಿದ್ದರು. ಮತ್ತೊಂದೆಡೆ ತಮಿಳು ನಾಡಿನಲ್ಲಿ ಮಲ್ಟಿಪ್ಲೆಕ್ಸ್, ಥಿಯೇಟರ್ ಮಾಲೀಕರು ಸ್ವಯಂಪ್ರೇರಿತರಾಗಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ ಸ್ಥಗಿತಗೊಳಿಸಿದ್ದಾರೆ.

    ರಾಜ್ಯಾದ್ಯಂತ 13 ಥಿಯೇಟರ್​ಗಳಲ್ಲಿ ಮಾತ್ರ ಸಿನಿಮಾ ಪ್ರದರ್ಶಿಸಲಾಗುತ್ತಿದೆ. ಅದರ ನಡುವೆಯೇ ಸೋಮವಾರ (ಮೇ 8) ಪಶ್ಚಿಮ ಬಂಗಾಳದಲ್ಲಿ ಸಿನಿಮಾ ಬ್ಯಾನ್ ಮಾಡಲಾಗಿದೆ. ‘ದ್ವೇಷಪೂರಿತ ಘಟನೆಗಳನ್ನು ತಡೆಯಲು, ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕಾ ಕ್ರಮವಾಗಿ ಚಿತ್ರವನ್ನು ನಿರ್ಬಂಧಿಸಲಾಗುವುದು’ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೊಂಡಿದ್ದಾರೆ.

    ಇತ್ತೀಚೆಗಷ್ಟೆ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ, ‘ಭಯೋತ್ಪಾ ದಕರ ಪಿತೂರಿಗಳನ್ನು ಹೊರತರುವಲ್ಲಿ ಸಿನಿಮಾ ಯಶಸ್ವಿಯಾಗಿದೆ’ ಎಂದು ‘ದಿ ಕೇರಳ ಸ್ಟೋರಿ’ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಮಧ್ಯಪ್ರದೇಶ ಸರ್ಕಾರ ಈಗಾಗಲೇ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದೆ. (ಏಜೆನ್ಸೀಸ್​)

    3 ದಿನ 35 ಕೋಟಿ ರೂ.; ಬಾಯ್ಕಾಟ್​ಗೆ ಬಗ್ಗದ, ಬ್ಯಾನ್​ಗೆ ಜಗ್ಗದ ‘ದಿ ಕೇರಳ ಸ್ಟೋರಿ’

    ಕರ್ನಾಟಕ ಚುನಾವಣೆ: ಬೀದಿಯಲ್ಲಿ ಸಿಕ್ತು ಝಣ ಝಣ ಕಾಂಚಾಣ! ಮರದ ಬುಡದಲ್ಲಿಯೂ ಗರಿ ಗರಿ ನೋಟು ಪತ್ತೆ

    ಹೇರ್​ ಕಟಿಂಗ್​ ಶಪಥ! ತನೂರ್​ ದೋಣಿ ದುರಂತದಲ್ಲಿ ಮೃತಪಟ್ಟ ಪೊಲೀಸ್​ ಅಧಿಕಾರಿ ನೆನೆದು ಜನರ ಕಣ್ಣೀರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts