More

    ನೀಟ್, ಜೆಇಇ ನಡೆಸಲು ಬೆಂಬಲ ಸೂಚಿಸಿದ ಉತ್ತರ ಪ್ರದೇಶ

    ಲಖನೌ: ನೀಟ್ ಮತ್ತು ಜೆಇಇ ಪರೀಕ್ಷೆ ನಡೆಸುವುದಕ್ಕೆ ಉತ್ತರ ಪ್ರದೇಶ ಸರ್ಕಾರ ಬೆಂಬಲ ನೀಡುತ್ತದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ.
    COVID-19 ಸಾಂಕ್ರಾಮಿಕ ರೋಗದಿಂದಾಗಿ ನೀಟ್ ಮತ್ತು ಜೆಇಇ ಪರೀಕ್ಷೆ ಮುಂದೂಡಬೇಕೆಂದು ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಒತ್ತಾಯಿಸಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಈ ಹೇಳಿಕೆ ನೀಡಿದೆ.

    ನೀಟ್ ಮತ್ತು ಜೆಇಇ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಬೆಂಬಲ ಸೂಚಿಸುತ್ತದೆ ಎಂದು ಲಖನೌದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಆದಿತ್ಯನಾಥ್ ಹೇಳಿದರು.

    ಇದನ್ನೂ ಓದಿ;  ಮತ್ತೇನಾಗುತ್ತೆ ನೀಟ್​, ಜೆಇಇ ಭವಿಷ್ಯ? ಸುಪ್ರೀಂ ಕೋರ್ಟ್​ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ ರಾಜ್ಯಗಳು

    ಆಗಸ್ಟ್ 9 ರಂದು ರಾಜ್ಯದಲ್ಲಿ ಬಿ.ಎಡ್ ಪರೀಕ್ಷೆಗಳು ನಡೆದಿದ್ದು, ಇದರಲ್ಲಿ ಅಂದಾಜು 5 ಲಕ್ಷ ಅಭ್ಯರ್ಥಿಗಳು ಭಾಗವಹಿಸಿದ್ದರು. ಪರೀಕ್ಷೆಯ ನಂತರ COVID ಸೋಂಕಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಬೆಳಕಿಗೆ ಬಂದಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು. ಅದೇ ರೀತಿ ರಾಜ್ಯದಲ್ಲಿ ಇನ್ನೂ ಕೆಲವು ಪರೀಕ್ಷೆಗಳು ನಡೆದಿವೆ ಎಂದು ತಿಳಿಸಿದರು.
    ಸೂಕ್ತ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ನೀಟ್ ಮತ್ತು ಜೆಇಇ ವೇಳಾಪಟ್ಟಿಯ ಪ್ರಕಾರ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. 

    ಅಣ್ಣಾಮಲೈ ಬಿಜೆಪಿ ಸೇರುತ್ತಿದ್ದಂತೆಯೇ ದಾಖಲಾಯ್ತು ಕೇಸ್‌!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts