More

    ಕರಾವಳಿ, ಮಲೆನಾಡಿನಲ್ಲಿ ಮಳೆ ಬಿರುಸು; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

    ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮತ್ತೆ ಬಿರುಸು ಪಡೆದಿದೆ. ಇದರ ಜತಗೆ ಒಳನಾಡು ಪ್ರದೇಶದ ಕೆಲವೆಡೆ ಸಾಧಾರಣ ಪ್ರಮಾಣದ ಮಳೆಯಾಗಿದೆ.

    ಘಟ್ಟ ಪ್ರದೇಶದಲ್ಲಿ ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ವರ್ಷಧಾರೆ ನದಿಗಳ ಹರಿವನ್ನು ಹೆಚ್ಚಿಸಿದೆ. ನೀರಿನ ಅಭಾವ ಎದುರಿಸುತ್ತಿರುವ ಅಣೆಕಟ್ಟೆಗಳಿಗೆ ನೀರಿನ ಒಳ ಹರಿವು ಕ್ರಮೇಣ ಹೆಚ್ಚಾಗುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

    ಇದರ ಹೊರತಾಗಿಯೂ ಒಳನಾಡಿನ ಕೆಲವೆಡೆ ಬಿರುಗಾಳಿ ಸಹಿತ, ಗುಡುಗು-ಮಿಂಚಿನ ಸಾಧ್ಯತೆ ಇದ್ದು, ಹಗುರದಿಂದ ಸಾಧಾರಣ ಪ್ರಮಾಣದವರೆಗೆ ಮಳೆಯಾಗಲಿದೆ. ಜು.24ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

    ಮೀನುಗಾರರಿಗೆ ಎಚ್ಚರಿಕೆ

    ಕರಾವಳಿಯ ತೀರದುದ್ದಕ್ಕೂ ಗಂಟೆಗೆ 45-55 ಕಿ.ಮೀ. ವೇಗದಲ್ಲಿ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೂಚಿಸಲಾಗಿದೆ.

    ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಹಗುರ ಮಳೆಯಾಗಬಹುದು. ಗರಿಷ್ಠ 28 ಮತ್ತು ಕನಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

    ಆರೆಂಜ್ ಅಲರ್ಟ್?

    ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಬೀಳಲಿರುವ ಕಾರಣ ಆರೆಂಜ್ ಅಲರ್ಟ್ ೋಷಿಸಿದೆ. ಕಲಬುರಗಿ, ಯಾದಗಿರಿ, ವಿಜಾಪುರ, ಬೆಳಗಾವಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts