More

    ಮತ ಎಣಿಕೆಗೆ ಎರಡು ದಿನ ಬೇಕೆ? ಬಲ್ಲವರು ತಿಳಿಸಿ; ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಉಪೇಂದ್ರ ಪ್ರಶ್ನೆ

    ಬೆಂಗಳೂರು: ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ. ಈ ಬಗ್ಗೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು​ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

    ಇದೀಗ ನಟ, ಪ್ರಜಾಕೀಯ ಪಕ್ಷ ಸಂಸ್ಥಾಪಕ ಉಪೇಂದ್ರ ಟ್ವಿಟರ್​ನಲ್ಲಿ ಪ್ರಶ್ನೆಯೊಂದನ್ನು ಎತ್ತಿದ್ದಾರೆ. ಕರ್ನಾಟಕದಲ್ಲಿ ಮೇ 10, ಬುಧವಾರದಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಮೇ 13 ಶನಿವಾರದಂದು ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆಗೆ ಎರಡು ದಿನ ಬೇಕೆ? ಬಲ್ಲವರು ತಿಳಿಸುತ್ತೀರಾ? ಎಂದು ಟ್ವೀಟ್ ಮಾಡಿದ್ದಾರೆ.

    ಸದ್ಯ ಉಪೇಂದ್ರ ಅವರು ಟ್ವಿಟರ್​ನಲ್ಲಿ ವ್ಯಕ್ತಪಡಿಸಿರುವ ಗೊಂದಲದ ಬಗ್ಗೆ ಅನೇಕರು ಕಮೆಂಟ್ ಮೂಲಕ ಉತ್ತರಿಸುತ್ತಿದ್ದಾರೆ. ಉಪೇಂದ್ರ ಅವರೇ, ಚುನಾವಣೆ ಆದ ದಿನವೇ ಮತ ಎಣಿಕೆ ಮಾಡಲು ಹೇಗೆ ಸಾಧ್ಯ? ಹಳ್ಳಿ ಹಳ್ಳಿಗಳಿಂದ ಮತ ಪೆಟ್ಟಿಗೆ ಸುರಕ್ಷಿತವಾಗಿ ಕೊಂಡೊಯ್ದು, ನೋಂದಾಯಿತ ಮತ ಎಣಿಕೆ ಕೇಂದ್ರಕ್ಕೆ ತಲುಪಬೇಕು. ಇದಕ್ಕೆ ಸಮಯ ಬೇಕಲ್ಲವೇ? ಮತ ಎಣಿಕೆ ಶುರುವಾಗುವುದು 13ನೇ ತಾರೀಖಿನಂದು. 11,12ನೇ ತಾರೀಖಿನಂದು ಅಲ್ಲ ಎಂದು ಬಳಕೆದಾರರೊಬ್ಬರು ಕಮೆಂಟ್ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts