

ಬೆಂಗಳೂರು: ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡುತ್ತಿದ್ದ ರೌಡಿಶೀಟರ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಚಾಮರಾಜಪೇಟೆಯ ಜಿಂಕೆನಗರದ ವಿಠಲನಗರ ನಿವಾಸಿ ಮಂಜುನಾಥ್ ಅಲಿಯಾಸ್ ಕೋಳಿ ಮಂಜ(28) ಬಂಧಿತ.
ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿ ಲೈಂಗಿಕ ಅಪರಾಧ ಎಸಗುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೈಬರ್ ಟಿಪ್ಲೈನ್ ಮೂಲಕ ಬಂದ ದೂರಿನ ಮೇರೆಗೆ ಆರೋಪಿ ವಿರುದ್ಧ ಬಸವೇಶ್ವರ ನಗರ ಸಿಇಎನ್(ಸೈಬರ್ ಕ್ರೈಂ) ಪೊಲೀಸ್ ಠಾಣೆಯಲ್ಲಿ ಎಪ್ಐಆರ್ ದಾಖಲಾಗಿದೆ. ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಕೋಳಿ ಮಂಜನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕೋಳಿ ಮಂಜನ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ 2014ರಲ್ಲೇ ರೌಡಿ ಶೀಟ್ ತೆರೆದಿದ್ದು, ಕಳ್ಳತನ ದರೋಡೆ ಸೇರಿ 8 ಪ್ರಕರಣ ದಾಖಲಾಗಿವೆ.