More

    ಉಪ್ಪಾರರ ಅಭಿವೃದ್ಧಿಗೆ ಬದ್ಧ

    ಗೋಕಾಕ: ಭಗೀರಥ ಉಪ್ಪಾರ ಸಮುದಾಯವನ್ನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

    ನಗರದ ಬೀರೇಶ್ವರ ಸಭಾಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉಪ್ಪಾರ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು.
    ಭಗೀರಥ ಉಪ್ಪಾರ ಸಮುದಾಯವನ್ನು ಎಸ್ಸಿ/ಎಸ್ಟಿಗೆ ಸೇರ್ಪಡೆ ಮಾಡುವ ಸಂಬಂಧ ಸಮುದಾಯವು ಹಲವು ವರ್ಷಗಳಿಂದ ಹೋರಾಟ ಮಾಡುತ್ತಿದೆ. ಸಮುದಾಯದ ಹೋರಾಟಗಳಿಗೆ ಸದಾ ಬೆಂಬಲ ನೀಡಿದ್ದೇನೆ. ಮೀಸಲಾತಿ ನೀಡಬೇಕೆಂಬುದು ನಮ್ಮೆಲ್ಲರ ಒತ್ತಾಸೆಯಾಗಿದೆ. ಈ ದಿಸೆಯಲ್ಲಿ ಜಿಲ್ಲೆಯ ಎಲ್ಲ ಶಾಸಕರು ಪಕ್ಷಬೇಧ ಮರೆತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು ಎಂದರು.

    ಕಳೆದ ಚುನಾವಣೆಯಲ್ಲಿ ನನ್ನ ಗೆಲುವಿನಲ್ಲಿ ಭಗೀರಥ ಉಪ್ಪಾರ ಸಮುದಾಯದವರು ಮಹತ್ವದ ಪಾತ್ರ ವಹಿಸಿದ್ದಾರೆ. ಸದಾ ನನ್ನ ಬೆನ್ನಿಗೆ ನಿಂತಿದ್ದಾರೆ. ಸಮುದಾಯಕ್ಕೆ ಸದಾ ಚಿರಋಣಿಯಾಗಿರುವೆ. ಮುಂದಿನ ದಿನಗಳಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಸಮುದಾಯದವರನ್ನು ಒಂದುಗೂಡಿಸಿ ಅದ್ದೂರಿಯಾಗಿ ಮಹರ್ಷಿ ಭಗೀರಥ ಜಯಂತಿ ಆಚರಿಸುವುದಾಗಿ ತಿಳಿಸಿದರು. ಸಾನ್ನಿಧ್ಯ ವಹಿಸಿದ್ದ ಹೊಸದುರ್ಗದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಮಾತನಾಡಿ, ಭಗೀರಥ ಉಪ್ಪಾರ ಸಮುದಾಯಕ್ಕೆ ಭವ್ಯ ಇತಿಹಾಸವಿದೆ. ಹುಟ್ಟು ಶ್ರೀಮಂತ ಜಾತಿಯಾಗಿದ್ದರೂ ಕಾಲಕ್ರಮೇಣ ಹಿಂದುಳಿದ ಜಾತಿಗೆ ಸೇರಬೇಕಾಯಿತು. ದೇಶಾದ್ಯಂತ 15-20 ಕೋಟಿ ಜನಸಂಖ್ಯೆ ಹೊಂದಿರುವ ಈ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಪ.ಜಾ/ಪ.ಪಂ ಸೇರಿಸಬೇಕಾಗಿದೆ. ಸಾಕಷ್ಟು ಬಾರಿ ಮನವಿ ಮಾಡಿಕೊಳ್ಳಲಾಗಿದ್ದು, ಸರ್ಕಾರಗಳು ಕಡೆಗೆಣಿಸುತ್ತ ಬಂದಿವೆ. ಇನ್ನಾದರೂ ಬೇಡಿಕೆಗಳಿಗೆ ಸ್ಪಂದಿಸುವಂತೆ ಮನವಿ ಮಾಡಿಕೊಂಡರು.

    ಹಿರಿಯ ನ್ಯಾಯವಾದಿಗಳಾದ ಬಿ.ಆರ್.ಕೊಪ್ಪ, ಎಸ್.ಎಂ.ಹತ್ತಿಕಟಗಿ, ಸಮುದಾಯದ ಮುಖಂಡರಾದ ಶಿವಪುತ್ರಪ್ಪ ಜಕಬಾಳ, ಬಿ.ಬಿ.ಹಂದಿಗುಂದ, ಶಾಮಾನಂದ ಪೂಜೇರಿ, ಅಡಿವೆಪ್ಪ ಕಿತ್ತೂರ, ಶಂಕರ ಬಿಲಕುಂದಿ, ರಾಮಣ್ಣ ಹಂದಿಗುಂದ, ವಿಠ್ಠಲ ಸವದತ್ತಿ, ಮುತ್ತೆಪ್ಪ ಕುಳ್ಳೂರ, ಪರಸಪ್ಪ ಬಬಲಿ, ಮಾಯಪ್ಪ ತಹಸೀಲ್ದಾರ್, ಭರಮಪ್ಪ ಉಪ್ಪಾರ, ಕುಶಾಲ ಗುಡೆನ್ನವರ, ಪರಸಪ್ಪ ಚೂನನ್ನವರ, ಸದಾಶಿವ ಗುದಗಗೋಳ, ರೇವಪ್ಪ ದುರದುಂಡಿ, ಗಂಗಾಧರ ಭಟ್ಟಿ, ಕವಿತಾ ರಾಜೇಶ, ಡಾ.ಮಹಾಂತೇಶ ಕಡಾಡಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts