

ನವದೆಹಲಿ: ಕರ್ನಾಟಕದ ಬೃಹತ್ ನೀರಾವರಿ ಯೋಜನೆಯಲ್ಲಿ ಒಂದಾದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದ 2023-24ನೇ ಸಾಲಿನ ಬಜೆಟ್ನಲ್ಲಿ ಅನುದಾನವನ್ನು ಘೋಷಣೆ ಮಾಡಿದೆ.
ವಿತ್ತ ಸಚಿವೆಯಾಗಿ ಇಂದು 5ನೇ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಭದ್ರಾ ಮೇಲ್ದಂಡೆ ಯೋಜನೆಗೆ 5,630 ಕೋಟಿ ರೂ. ಅನುದಾನ ಮೀಸಲು ಇಟ್ಟಿರುವುದಾಗಿ ಘೋಷಣೆ ಮಾಡಿದರು.
ಭದ್ರಾ ಮೇಲ್ದಂಡೆ ಯೋಜನೆಯು ಭದ್ರಾ ಜಲಾಶಯದ ನೀರನ್ನು ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಕೃಷಿ ಭೂಮಿಗೆ ನೀರು ಒದಗಿಸುವ ಯೋಜನೆ ಇದಾಗಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 10ನೇ ಪೂರ್ಣ ಪ್ರಮಾಣದ ಬಜೆಟ್ ಇದಾಗಿದ್ದು, ವಿತ್ತ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ 5ನೇ ಬಜೆಟ್ ಆಗಿದೆ. ಈ ಬಾರಿಯು ಸೂಟ್ಕೇಸ್ ಸಂಪ್ರದಾಯವಿಲ್ಲ ಮತ್ತು ಮುದ್ರಣದ ಪ್ರತಿಗಳು ಇರುವುದಿಲ್ಲ. ಕಳೆದ ಬಾರಿಯಂತೆ ಇ ಬಜೆಟ್ ಮಂಡನೆಯಾಗುತ್ತಿದೆ.