More

    ಮೇಲ್ಮನೆ ಚುನಾವಣೆ; 6 ಕ್ಷೇತ್ರದಲ್ಲಿ 2 ಸ್ಥಾನ ಜೆಡಿಎಸ್‌ಗೆ ಬಿಟ್ಟುಕೊಡಲು ತೀರ್ಮಾನ?

    ಬೆಂಗಳೂರು: ಲೋಕಸಭೆ ಚುನಾವಣೆಯ ನಡುವೆಯೇ ರಾಜ್ಯದ ಮೇಲ್ಮನೆಯ ಆರು ಸ್ಥಾನಗಳಿಗೂ ಚುನಾವಣೆ ೋಷಣೆಯಾಗಿದೆ.

    ಸಾಕು ಸಾಕಪ್ಪ ಈ ಚುನಾವಣೆ ಪ್ರಚಾರ ಎಂದು ರಾಜಕೀಯ ಪಕ್ಷಗಳ ನೇತಾರರು ನಿಟ್ಟುಸಿರು ಬಿಡುವ ಹೊತ್ತಿಗೆ ಮತ್ತೊಂದು ಚುನಾವಣಾ ಸಮರ ಶುರುವಾಗಿದೆ.

    ಕಾಂಗ್ರೆಸ್ ಈಗಾಗಲೇ ಈ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ೋಷಣೆ ಮಾಡಿದೆ. ಹಲವು ಅಭ್ಯರ್ಥಿಗಳು ಈಗಾಗಲೇ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಆದರೆ ಬಿಜೆಪಿ, ಜೆಡಿಎಸ್ ಇನ್ನು ತನ್ನ ಅಭ್ಯರ್ಥಿಗಳನ್ನು ೋಷಣೆ ಮಾಡಿಲ್ಲ.
    ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಆರು ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳು ಬಿಜೆಪಿ, 2 ಕ್ಷೇತ್ರಗಳು ಜೆಡಿಎಸ್ ಪಾಲಾಗಲಿವೆ ಎಂದು ಹೇಳಲಾಗುತ್ತದೆ.

    ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕೂಡ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದವು. ಆದರೆ ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪುಟ್ಟಣ್ಣ ಗೆಲುವು ಸಾಧಿಸಿದ್ದರು. ಮೈತ್ರಿ ಮಾಡಿಕೊಂಡ ಬಳಿಕ ನಡೆದ ಮೊದಲ ಚುನಾವಣೆಯಲ್ಲೇ ಮೈತ್ರಿ ಅಭ್ಯರ್ಥಿ ಮಣ್ಣು ಮುಕ್ಕಿದ್ದರು.

    ಮೈತ್ರಿ ಮುಂದುವರಿಕೆ ನಿಶ್ಚಿತ:

    ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ರಾಷ್ಟ್ರ, ಅಂತಾರಾಷ್ಟ್ರ ಮಟ್ಟದಲ್ಲಿ ದೊಡ್ಡ ಸದ್ದು ಮಾಡಿ ಎನ್‌ಡಿಎ ಅನ್ನು ಮುಜುಗರಕ್ಕೀಡು ಮಾಡಿದೆ. ಹೀಗಾಗಿ ಮೈತ್ರಿ ಮುಂದುವರಿಯುವ ಬಗ್ಗೆ ಹಲವು ಅನುಮಾನಗಳೂ ಇದ್ದೇ ಇವೆ. ಪ್ರಜ್ವಲ್ ರೇವಣ್ಣ ವಿಷಯದಲ್ಲಿ ಬಿಜೆಪಿ ಅಂತರ ಕಾಯ್ದುಕೊಂಡಿರುವುದರಿಂದ ಉಭಯ ಪಕ್ಷಗಳ ನಡುವೆ ಸಂಬಂಧ ತುಸು ಹಳಸುವಂತೆ ಮಾಡಿದೆ. ಹಾಗಾಗಿ ಮೈತ್ರಿ ಮುಂದುವರಿಯುವ ಬಗ್ಗೆ ಎರಡೂ ಪಕ್ಷಗಳ ರಾಜ್ಯ ನಾಯಕರಲ್ಲಿ ಅನುಮಾನಗಳಿವೆ. ಆದರೆ ಜೆಡಿಎಸ್ ಮೂಲಗಳ ಪ್ರಕಾರ, ಮೇಲ್ಮನೆ ಚುನಾವಣೆಗೆ ಸಂಬಂಧಿಸಿದಂತೆ ಹಿಂದೆಯೇ ಚರ್ಚೆ ನಡೆದಿದೆ. ಹಾಗಾಗಿ ಮೈತ್ರಿ ಅಬಾಧಿತ. ಜೆಡಿಎಸ್‌ಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಸೇರಿದಂತೆ ಮೂರು ಸ್ಥಾನ ಬಿಟ್ಟುಕೊಡಲಾಗಿತ್ತು. ಈಗ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಮುಗಿದಿದ್ದು, ಉಳಿದ ಎರಡು ಸ್ಥಾನಗಳನ್ನು ಜೆಡಿಎಸ್ ಪಡೆಯಲಿದೆ ಎಂದು ಮೂಲಗಳು ಹೇಳುತ್ತವೆ.

    ಯಾವ ಜಿಲ್ಲೆ ವ್ಯಾಪ್ತಿಯಲ್ಲಿ ಚುನಾವಣೆ?:

    ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಬೆಂಗಳೂರು , ಬೆಂಗಳೂರು ಗ್ರಾಮಾಂತರ, ರಾಮನಗರ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮೂರು ಪದವೀಧರರ ಕ್ಷೇತ್ರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಜೂ.3 ರಂದು ಚುನಾವಣೆ ನಡೆಯಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts