ಉನ್ನತ ಶಿಕ್ಷಣಕ್ಕೆ ಉತ್ತಮ ಅವಕಾಶ : ಶಾಸಕ ಅಶೋಕ್ ಕುಮಾರ್ ರೈ ಅಭಿಪ್ರಾಯ

New Project (13)
Published on

ವಿಜಯವಾಣಿ ಸುದ್ದಿಜಾಲ ಉಪ್ಪಿನಂಗಡಿ

ಪದವಿ ಗಳಿಕೆ ಬಳಿಕವೂ ಉನ್ನತ ಶಿಕ್ಷಣಕ್ಕೆ ಬಹಳಷ್ಟು ಒಳ್ಳೆಯ ಅವಕಾಶಗಳಿವೆ. ಇದರ ಉಪಯೋಗ ಪಡೆಯುವುದರ ಜತೆಗೆ ಶ್ರಮ, ಪ್ರಾಮಾಣಿಕತೆ ಮತ್ತು ಒಳ್ಳೆಯ ಚಿಂತನೆ ಮೂಲಕ ಬದುಕಿನ ಹಾದಿ ಹಿಡಿದರೆ ಜೀವನದಲ್ಲಿ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆ, ಕಾಲೇಜು ವಾರ್ಷಿಕೋತ್ಸವ ಹಾಗೂ 1 ಕೋಟಿ ರೂ. ಅನುದಾನದಲ್ಲಿ ನಿರ್ಮಾಣಗೊಂಡಿರುವ ವಿಸ್ತೃತ ತರಗತಿ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

ನಿವೃತ್ತ ಪ್ರಾಧ್ಯಾಪಕ ಪ್ರೊ.ನರೇಂದ್ರ ರೈ ದೇರ್ಲ, ಬೆಟ್ಟಂಪಾಡಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ವರದರಾಜ ಚಂದ್ರಗಿರಿ ಮಾತನಾಡಿದರು. ಪ್ರಾಂಶುಪಾಲ ರವಿರಾಜ್ ಎಸ್., ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಹಾಶ ಶೆಟ್ಟಿ, ಸದಸ್ಯರಾದ ಎ.ಕೃಷ್ಣ ರಾವ್ ಅರ್ತಿಲ, ಇಸ್ಮಾಯಿಲ್ ಇಕ್ಬಾಲ್, ವಿನ್ಸೆಂಟ್ ಫರ್ನಾಂಡಿಸ್, ಮಹಾಬಲೇಶ್ವರ ಭಟ್, ಸವಿತಾ ಹರೀಶ್ ಉಪಸ್ಥಿತರಿದ್ದರು. ಕಾರ‌್ಯಕ್ರಮ ಸಂಚಾಲಕರಾದ ಡಾ.ಹರಿಪ್ರಸಾದ್ ಸ್ವಾಗತಿಸಿದರು. ಡಾ.ಸಂತೋಷ್ ವಂದಿಸಿದರು. ಪ್ರಮೋದ್ ಕಾರ‌್ಯಕ್ರಮ ನಿರೂಪಿಸಿದರು.

ಸನ್ಮಾನ, ಅಭಿನಂದನೆ

ಕಾಲೇಜಿಗೆ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಿದ ವಿನ್ಸೆಂಟ್ ಫರ್ನಾಂಡಿಸ್ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net