ಯುಪಿಎಸ್​ಸಿ ಸಾಧಕರಿಗೆ ಸನ್ಮಾನ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್​ಸಿ) ಪರೀಕ್ಷೆಯಲ್ಲಿ ಉತ್ತೀರ್ಣ ರಾದ ಅಭ್ಯರ್ಥಿಗಳಿಗೆ ಇನ್​ಸೈಟ್ಸ್ ಐಎಎಸ್ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.

ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ, ನಾಗರಿಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದೇಶವನ್ನು ಇನ್ನಷ್ಟು ಬಲಿಷ್ಠ ಮಾಡಲು ಅವಕಾಶ ಸಿಕ್ಕಂತಾಗಿದೆ. ದೇಶದ ಒಳಿತು ಮತ್ತು ಅಭಿವೃದ್ಧಿಗಾಗಿ ಶ್ರಮಿಸಿ ತಮಗೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ದೇಶಾದ್ಯಂತ ಪರೀಕ್ಷೆಯಲ್ಲಿ ಉತ್ತೀರ್ಣರಾದ 150ಕ್ಕೂ ಹೆಚ್ಚು ಅಭ್ಯರ್ಥಿಗಳಲ್ಲಿ 70 ಅಭ್ಯರ್ಥಿಗಳನ್ನು ಸನ್ಮಾನಿಸಲಾಯಿತು. ಅವರಲ್ಲಿ 24 ಜನ ಕರ್ನಾಟಕದವರಾಗಿದ್ದಾರೆ.

ನಗರ ಪೊಲೀಸ್ ಆಯುಕ್ತ ಸುನೀಲ್​ಕುಮಾರ್, ಹೆಚ್ಚುವರಿ ಪೊಲೀಸ್ ಆಯುಕ್ತ ಸೀಮಂತಕುಮಾರ್ ಸಿಂಗ್, ಇನ್​ಸೈಟ್ಸ್ ಐಎಎಸ್ ಸಂಸ್ಥೆ ಸ್ಥಾಪಕ ಜಿ.ಬಿ. ವಿನಯ್ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *