More

    ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ವಿದ್ಯಾರ್ಹತೆ, ವಯೋಮಿತಿ, ವೇತನ, ಪರೀಕ್ಷೆ ಮಾದರಿ ಇತರೆ ಮಾಹಿತಿ ಇಲ್ಲಿದೆ

    ಕೇಂದ್ರ ಲೋಕ ಸೇವಾ ಆಯೋಗವು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಪರಿಚ್ಛೇದ 320ರ ಅಡಿಯಲ್ಲಿ ಸ್ಪರ್ಧಾ ಪರೀಕ್ಷೆಯ ಮೂಲಕ ನಾಗರಿಕ ಸೇವೆ, ಭಾರತೀಯ ರಕ್ಷಣಾ ಪಡೆಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ಹೊತ್ತಿದೆ. ಪ್ರಸ್ತುತ ಈ ಆಯೋಗವು ವಿವಿಧ ಹುದ್ದೆಗಳ ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಫೆ.29ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

    ಒಟ್ಟು ಹುದ್ದೆ: 120

    ಹುದ್ದೆಯ ವಿವರ 
    ಅಸಿಸ್ಟೆಂಟ್ ಡೈರೆಕ್ಟರ್ 51
    ಸೈಂಟಿಸ್ಟ್-ಬಿ 12
    ಅಡ್ಮಿನಿಸ್ಟ್ರೇಟಿವ್ ಆಫೀಸರ್ ಗ್ರೇಡ್-ಐ 2
    ಸ್ಪೆಷಲಿಸ್ಟ್ ಗ್ರೇಡ್ ಐಐಐ 54
    ಇಂಜಿನಿಯರ್ ಶಿಪ್ ಸರ್ವೇಯರ್ 1

    ವಿದ್ಯಾರ್ಹತೆ 
    ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಹುದ್ದೆಗಳಿಗೆ ಅನುಗುಣವಾಗಿ ಬಿ.ಟೆಕ್/ಬಿ.ಎಸ್ಸಿ/ಪದವಿ/ಸ್ನಾತಕೋತ್ತರ ಪದವಿ/ಎಂಬಿಬಿಎಸ್/ಎಂಡಿ/ತತ್ಸಮಾನ ಪದವಿ ಪೂರ್ಣಗೊಳಿಸಿರಬೇಕು. ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕೆಲಸದ ಅನುಭವ ಹೊಂದಿರಬೇಕು.

    ವಯೋಮಿತಿ, ವೇತನ 
    ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 35 – ಗರಿಷ್ಠ 50 ವರ್ಷದೊಳಗಿರಬೇಕು. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3ವರ್ಷ,ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ವರ್ಷ ವಯೋಸಡಿಲಿಕೆ ಅನ್ವವಾಗಲಿದೆ. ಆಯೋಗದ ನಿಯಮಾನುಸಾರ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಲಾಗಿದೆ.

    ಅರ್ಜಿ ಶುಲ್ಕ 
    ಎಸ್ಸಿ/ಎಸ್ಟಿ/ಪಿಡಬ್ಲ್ಯುಬಿಡಿ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಇತರ ಅಭ್ಯರ್ಥಿಗಳಿಗೆ 25ರೂ. ಶುಲ್ಕ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ
    ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆಯು ನೇಮಕಾತಿ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿದೆ.

    ಅರ್ಜಿ ಸಲ್ಲಿಕೆ/ಹೆಚ್ಚಿನ ಮಾಹಿತಿಗಾಗಿ
    www.upsconline.nic.in

    ಅರ್ಜಿ ಸಲ್ಲಿಸಲು ಕೊನೇ ದಿನ
    29-02-2024

    ಇಸ್ರೋದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆಗೆ ಮಾ.01 ಕೊನೆ ದಿನ

     

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts