More

    ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

    ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್​ಸಿ) ಅಖಿಲ ಭಾರತ ನಾಗರಿಕ ಸೇವಾ ಹುದ್ದೆಗಳ ಆಯ್ಕೆಗಾಗಿ ನಡೆಸುವ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿದೆ. ಯುಪಿಎಸ್​ಸಿ ಕೇಂದ್ರ ಕಚೇರಿಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
    ಲಾಕ್​ಡೌನ್​ ನಂತರದಲ್ಲಿ ದೇಶಾದ್ಯಂತ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲು ಸೋಮವಾರ ಸಭೆ ಕರೆಯಲಾಗಿತ್ತು. ಮೇ 17ರವರೆಗೆ ಮತ್ತೊಂದು ಸುತ್ತಿನ ಲಾಕ್​ಡೌನ್​ ವಿಸ್ತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನಾಗರಿಕ ಸೇವಾ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಅನಿದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಯುಪಿಎಸ್​ ತಿಳಿಸಿದೆ. ಮೇ 31ರಿಂದ ಈ ಪರೀಕ್ಷೆಗಳು ನಡೆಯಬೇಕಿತ್ತು.

    ಇದಲ್ಲದೇ, ಭಾರತೀಯ ಅರಣ್ಯ ಸೇವೆಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮೇ 20 ನಂತರ ಮತ್ತೊಮ್ಮೆ ಪರಿಸ್ಥಿತಿಯನ್ನು ಅವಲೋಕಿಸಿ ಹೊಸ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಯುಪಿಎಸ್​ಸಿ ಪ್ರಕಟಿಸಿದೆ.

    ಇದನ್ನೂ ಓದಿ; ಮುಕ್ತ ವಿವಿ ವಿದ್ಯಾರ್ಥಿಗಳೇ ಗಮನಿಸಿ, ಮನೆಯಿಂದಲೇ ಕಾಂಟಾಕ್ಟ್​ ಕ್ಲಾಸ್​ಗಳಿಗೆ ಹಾಜರಾಗಿ

    ಕರೊನಾ ಸೋಂಕು ವ್ಯಾಪಿಸುತ್ತಿರುವುದರಿಂದ ರಾಷ್ಟ್ರಮಟ್ಟದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ. ಹೀಗಾಗಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಎಂದು ಯುಪಿಎಸ್​ಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಯುಪಿಎಸ್​ಸಿ ಪರೀಕ್ಷೆಗಳಿಗೆ 10 ಲಕ್ಷಕ್ಕೂ ಅಧಿಕ ಜನರು ಹೆಸರು ನೋಂದಾಯಿಸಿದ್ದಾರೆ. ಪರೀಕ್ಷೆ ನಡೆಸಲು ಅಂದಾಜು 1.6 ಲಕ್ಷ ಜನರು, 2,500 ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಇವೆಲ್ಲವನ್ನೂ ಕಡಿಮೆ ಅವಧಿಯಲ್ಲಿ ಪಡೆದುಕೊಳ್ಳುವುದು ಸಾಧ್ಯವಾಗುವುದಿಲ್ಲ. ಹೀಗಾಗಿ ಮೇ 31ರಂದು ಪರೀಕ್ಷೆ ನಡೆಸುವುದು ಕಷ್ಟಸಾಧ್ಯ. ಇದನ್ನು ಮುಂದೂಡುವುದೊಂದೇ ದಾರಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    ಮನೆಯಲ್ಲೇ ಮದುವೆಯಾದ ಜೋಡಿಗೆ ಪೊಲೀಸರು ನೀಡಿದ ಉಡುಗೊರೆ ಎಂಥದ್ದು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts