ಯುಪಿಎಸ್​​​ಸಿ : ಪೂರ್ವಭಾವಿ ಪರೀಕ್ಷೆ ದಿನಾಂಕ ಪ್ರಕಟಿಸಲು ನಿರ್ಧಾರ

UPSC
Published on

ನವದೆಹಲಿ: ಯುಪಿಎಸ್ಸಿ ನಾಗರಿಕ ಸೇವೆಗಳ ಪೂವರ್ಭಾವಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಜೂನ್ 5 ರಂದು ಯುಪಿಎಸ್​ಸಿ ಪ್ರಕಟಿಸಲಿದೆ.

ಈ ಕುರಿತು ಯುಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆಯನ್ನು ಬುಧವಾರ ಪ್ರಕಟಿಸಿದೆ.

ಈ ಮೊದಲು ಪೂರ್ವಭಾವಿ ಪರೀಕ್ಷೆಯನ್ನು ಮೇ 31 ರಂದು ನಡೆಸಲು ಯೋಜಿಸಲಾಗಿತ್ತು, ಆದರೆ ಲಾಕ್‌ಡೌನ್ ಜಾರಿಯಿಂದಾಗಿ ಅದನ್ನು ಮುಂದೂಡಬೇಕಾಯಿತು. ಪರೀಕ್ಷೆ ಮುಂದೂಡುವ ನಿರ್ಧಾರವನ್ನು ಆಯೋಗ ಮೇ 4 ರಂದು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿತ್ತು.

ಅದಾದ ನಂತರ ಪೂರ್ವಭಾವಿ ಪರೀಕ್ಷೆಗೆ ಹೊಸ ದಿನಾಂಕವನ್ನು ಮೇ 20 ರಂದು ಪ್ರಕಟಿಸಬೇಕಿತ್ತು, ಆದರೆ ಆಯೋಗವು ಹೊಸ ದಿನಾಂಕವನ್ನು ಪ್ರಕಟಿಸುವ ನಿರ್ಧಾರವನ್ನು ಮತ್ತೆ ಮುಂದೂಡಿದೆ.

ಅಭ್ಯರ್ಥಿಗಳು ಜೂನ್ 5 ರಂದು upsc.gov.in ನಲ್ಲಿ ಪ್ರಕಟಗೊಂಡ ನಂತರ ಆನ್‌ಲೈನ್‌ನಲ್ಲಿ ಪರೀಕ್ಷೆಯ ಪರಿಷ್ಕೃತ ದಿನಾಂಕನ್ನು ನೋಡಬಹುದು.

ಪ್ರತಿ ವರ್ಷ ಏಳು ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪೂರ್ವಭಾವಿ ಪರೀಕ್ಷೆಗೆ ಅರ್ಜಿ ಸಲ್ಲಿಸುತ್ತಾರೆ. ಈ ವರ್ಷ ಈ ಪರೀಕ್ಷೆಗೆ 10 ಲಕ್ಷ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net