More

    ಮೇಘನಾಗೆ ಯುಪಿಎಸ್‌ಸಿ 589ನೇ rank

    ಶಿವಮೊಗ್ಗ: ಯುಪಿಎಸ್‌ಸಿ ಪರೀಕ್ಷೆಯಲ್ಲಿ ಶಿವಮೊಗ್ಗದ ಐ.ಎನ್.ಮೇಘನಾ ರಾಷ್ಟ್ರ ಮಟ್ಟದಲ್ಲಿ 589ನೇ ಶಿವಮೊಗ್ಗ: ಯುಪಿಎಸ್‌ಸಿ ಪರೀಕ್ಷೆಯಲ್ಲಿ ಶಿವಮೊಗ್ಗದ ಐ.ಎನ್.ಮೇಘನಾ ರಾಷ್ಟ್ರ ಮಟ್ಟದಲ್ಲಿ 589ನೇ rank ಪಡೆದಿದ್ದಾರೆ. ಕಳೆದ ವರ್ಷ 617ನೇ rank ಗಳಿಸಿ ಪ್ರಸ್ತುತ ಮಹಾರಾಷ್ಟ್ರದಲ್ಲಿ ಐಪಿಎಸ್ ಪ್ರೊಬೆಷನರಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

    ನಿವೃತ್ತ ಡಿಸಿಎಫ್, ಶಿವಮೊಗ್ಗ ನಿವಾಸಿ ಐ.ಎಂ.ನಾಗರಾಜ್ ಅವರ ಪುತ್ರಿ ಮೇಘನಾ ಮೂರು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಯುಪಿಎಸ್‌ಸಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು. 2022ರಲ್ಲಿ ಪರೀಕ್ಷೆಗೆ ಹಾಜರಾಗಿದ್ದರೂ ಸಂದರ್ಶನದಲ್ಲಿ ಉತ್ತೀರ್ಣರಾಗಿರಲಿಲ್ಲ. ಹಿಂದಿನ ವರ್ಷ ಎರಡನೇ ಪ್ರಯತ್ನದಲ್ಲಿ ಅಪರೂಪದ ಸಾಧನೆ ಮಾಡಿದ್ದರು. ಈ ವರ್ಷ ಸಾಧನೆಯನ್ನು ಮತ್ತಷ್ಟು ಉತ್ತಮಪಡಿಸಿಕೊಂಡಿದ್ದಾರೆ.
    ಬೆಂಗಳೂರು ವಿಜಯನಗರ ಇನ್‌ಸೈಟ್ಸ್ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಲ್ಲಿ ಒಂದು ವರ್ಷ ತರಬೇತಿ ಪಡೆದಿದ್ದರು. ತಂದೆ ಸರ್ಕಾರಿ ಹುದ್ದೆಯಲ್ಲಿ ಇದ್ದುದರಿಂದ ಇವರು ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಪಡೆಯಬೇಕಾಯಿತು. ಚಾಮರಾಜನಗರ ಜಿಲ್ಲೆ ಬಂಡಿಪುರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದ ಇವರು, ದಾವಣಗೆರೆ ಸರ್ಕಾರಿ ಶಾಲೆಯಲ್ಲಿ ಹಿರಿಯ ಪ್ರಾಥಮಿಕ ಶಿಕ್ಷಣ ಪಡೆದಿದ್ದರು. ಶಿವಮೊಗ್ಗ ಸಾಂದೀಪನಿಯಲ್ಲಿ ಪ್ರೌಢ ಶಿಕ್ಷಣ ಮುಗಿಸಿ ಪೇಸ್ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡಿದ್ದರು.
    ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಪದವಿ ಪಡೆದ ಬಳಿಕ ಯುಪಿಎಸ್‌ಸಿ ಪರೀಕ್ಷೆ ಕಡೆಗೆ ಗಮನ ಹರಿಸಿದ್ದರು. ಮೊದಲ ಪ್ರಯತ್ನದಲ್ಲಿ ವಿಫಲವಾದರೂ ಎರಡನೇ ಪ್ರಯತ್ನದಲ್ಲಿ ಗೆಲುವು ಸಿಕ್ಕಿತ್ತು. ಈಗ ಮೂರನೇ ಪ್ರಯತ್ನದಲ್ಲಿ ranking ಮತ್ತಷ್ಟು ಉತ್ತಮಪಡಿಸಿಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts