ಸಾವಿನ ಬಗ್ಗೆ ಮಾತು​…. ಅಭಿಮಾನಿಗಳನ್ನು ಚಿಂತೆಗೀಡುಮಾಡಿದ ಉರ್ಫಿ ಜಾವೇದ್​ ಟ್ವೀಟ್!

Urfi
Published on

ಮುಂಬೈ: ಅರೆಬರೆ ಬಟ್ಟೆ ಮತ್ತು ವಿಚಿತ್ರ ಫ್ಯಾಶನ್​ನಿಂದಲೇ ಸೋಶಿಯಲ್​ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿರುವ ನಟಿ ಹಾಗೂ ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್ ಉರ್ಫಿ ಜಾವೇದ್​ ಕೆಲ ದಿನಗಳಿಂದ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಜಾಲತಾಣದಲ್ಲಿ ತನ್ನ ಅರೆಬೆತ್ತಲೆ ಉಡುಗೆಯ ಕಾರಣದಿಂದ ಟೀಕೆಗೆ ಗುರಿಯಾಗಿದ್ದಾರೆ. ಇದರ ನಡುವೆ ಉರ್ಫಿ ಮಾಡಿರುವ ಟ್ವೀಟ್​ ಒಂದು ಅವರ ಅಭಿಮಾನಿಗಳನ್ನು ಆತಂಕಕ್ಕೆ ದೂಡಿದೆ.

ಆತ್ಮಹತ್ಯೆಗೆ ಬಗ್ಗೆ ಉರ್ಫಿ ಮಾಡಿರುವ ನಿಗೂಢ ಟ್ವೀಟ್​ ಜಾಲತಾಣದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. "ಆತ್ಮಹತ್ಯೆ ಮಾಡಿಕೊಳ್ಳಲು ಜೀವನ ತುಂಬಾ ಚಿಕ್ಕದಾಗಿದೆ ಸ್ವಲ್ಪ ತಾಳ್ಮೆಯಿಂದಿರಿ ನೀವು ಸಾಯುತ್ತೀರಿ" ಎಂದು ಮಾರ್ಮಿಕವಾಗಿ ಉರ್ಫಿ ಟ್ವೀಟ್​ ಮಾಡಿದ್ದಾರೆ. ಇದೀಗ ಈ ಟ್ವೀಟ್​ ಅನ್ನು ನಾನಾ ರೀತಿಯಲ್ಲಿ ಅಭಿಮಾನಿಗಳು ವಿಶ್ಲೇಷಿಸುತ್ತಿದ್ದು, ಕೆಲವರು ಉರ್ಫಿ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಟ್ವೀಟ್​ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ಮಂದಿ ಕಾಮೆಂಟ್​ ಮಾಡಿದ್ದಾರೆ. ನನ್ನ ಸ್ನೇಹಿತ ಡಿಸೆಂಬರ್ ಕೊನೆಯ ವಾರದಲ್ಲಿ ಆತ್ಮಹತ್ಯೆ ಮಾಡಿಕೊಂಡನು ಮತ್ತು ಅವನ ವಯಸ್ಸು ಕೇವಲ 20. ಅವನು ನನ್ನ ಬಾಲ್ಯದ ಗೆಳೆಯ. ಅವರು ಖಿನ್ನತೆಗೆ ಒಳಗಾಗಿದ್ದರು ಆದರೆ ಅವರ ನಷ್ಟವು ಅವರ ಕುಟುಂಬಕ್ಕೆ ಮಾತ್ರವಲ್ಲದೆ ಅವರ ಬಾಲ್ಯದ ಸ್ನೇಹಿತರ ಮೇಲೂ ಪರಿಣಾಮ ಬೀರುತ್ತದೆ. ನಾನು ಅವನನ್ನು ಬಹಳಷ್ಟು ಕಳೆದುಕೊಂಡೆ ಎಂದು ನೆಟ್ಟಿಗರೊಬ್ಬರು ಟ್ವೀಟ್​ ಮಾಡಿದ್ದಾರೆ.

ಉರ್ಫಿ ನೋವಿನಲ್ಲಿದ್ದಾರೆ ಎಂದು ಕೆಲವರು ಭಾವಿಸಿ, ಆಕೆಗೆ ಸಾಂತ್ವಾನ ಹೇಳುತ್ತಿದ್ದಾರೆ. ಆದರೆ, ಕೆಲವು ನೆಟ್ಟಿಗರು ಇದನ್ನು ಸಕಾರಾತ್ಮಕ ಆಯಾಮದಲ್ಲಿ ತೆಗೆದುಕೊಂಡಿದ್ದಾರೆ. ಉರ್ಫಿ ಅವರು ಬರೆದಿರುವ ಸಾಲು ವಾಸ್ತವವಾಗಿ ಪ್ರೇರಕವಾಗಿದೆ. ಇದು ಸ್ಫೂರ್ತಿಯ ಮಾತು. ಜೀವನ ತುಂಬಾ ಚಿಕ್ಕದು, ಅದನ್ನು ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ವ್ಯರ್ಥ ಮಾಡಬಾರದು ಎಂಬ ಅರ್ಥದಲ್ಲಿ ಹೇಳಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ.

ಆದರೆ, ಈ ಸಂದರ್ಭದಲ್ಲಿ ಉರ್ಫಿ ಆತ್ಮಹತ್ಯೆ ಬಗ್ಗೆ ಯಾಕೆ ಟ್ವೀಟ್​ ಮಾಡಬೇಕಿತ್ತು ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಏಕೆಂದರೆ, ಕೆಲ ದಿನಗಳಿಂದ ಉರ್ಫಿ, ಕೆಲವರ ಟಾರ್ಗೆಟ್​ ಆಗಿದ್ದಾರೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿ ಚಿತ್ರಾ ವಾಘ್ ಅವರೊಂದಿಗೆ ಕಾನೂನು ಹೋರಾಟದಲ್ಲಿ ಉರ್ಫಿ, ಸಿಲುಕಿಕೊಂಡಿದ್ದಾರೆ. ತಮ್ಮ ಬಟ್ಟೆಗಳೊಂದಿಗೆ 'ಅಶ್ಲೀಲತೆಯನ್ನು' ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಉರ್ಫಿ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಉರ್ಫಿ ಸಹ ಪ್ರತಿದೂರು ದಾಖಲಿಸಿದ್ದಾರೆ.

ಉರ್ಫಿಗೆ ಸಾಕಷ್ಟು ಬೆದರಿಕೆ ಹಾಗೂ ಟೀಕೆಗಳು ವ್ಯಕ್ತವಾಗುತ್ತಿರುವುದರಿಂದ ಭದ್ರತೆ ಕೋರಿ ಮುಂಬೈ ಪೊಲೀಸರಿಗೆ ಉರ್ಫಿ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.

ಇನ್ನು ಬಿಗ್​ ಬಾಸ್​ ಒಟಿಟಿ ಷೋನಲ್ಲಿ ಸ್ಪರ್ಧಿಸಿ ಬಂದ ಬಳಿಕ ಭಾರಿ ಪ್ರಸಿದ್ಧಿ ಪಡೆದಿರುವ ಈ ಉರ್ಫಿ ಜಾವೇದ್, ಯಾವುದಕ್ಕೂ ಕೇರ್‌ ಮಾಡದೇ ತನ್ನ ಮೈಮಾಟ ಪ್ರದರ್ಶನ ಮಾಡುವಲ್ಲಿ ಎತ್ತಿದ ಕೈ. ಪ್ರತಿದಿನ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪಡ್ಡೆ ಹುಡುಗರ ಮೈ ಬಿಸಿಯೇರಿಸುವಂತಹ ಫೋಟೋಗಳನ್ನು ಶೇರ್​ ಮಾಡುತ್ತಲೇ ಇರುತ್ತಾರೆ. ಅವರ ಹಾಟ್​ ಅವತಾರಕ್ಕೆ ಫಿದಾ ಆಗಿರುವ ಅಭಿಮಾನಿಗಳು ಪ್ರತಿದಿನ ಅವರ ಫೋಟೋ ಅಥವಾ ವಿಡಿಯೋಗಳಿಗೆ ಎದುರು ನೋಡುತ್ತಲೇ ಇರುತ್ತಾರೆ. (ಏಜೆನ್ಸೀಸ್​)

rf

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net