More

    ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಮಾತು ಕೊಟ್ಟಿದ್ದೇನೆ; ಉರಿಗೌಡ-ನಂಜೇಗೌಡ ಸಿನಿಮಾ ನಿರ್ಮಾಣ ಮಾಡಲ್ಲ ಎಂದ ಮುನಿರತ್ನ

    ಮಂಡ್ಯ: ನಾನು ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಮಾತು ಕೊಟ್ಟಿದ್ದೇನೆ. ಯಾವುದೇ ಕಾರಣಕ್ಕೂ ಉರಿಗೌಡ-ನಂಜೇಗೌಡ ಸಿನಿಮಾ ನಿರ್ಮಾಣ ಮಾಡುವುದಿಲ್ಲ ಎಂದು ಸಚಿವ ಮುನಿರತ್ನ ಹೇಳಿದ್ದಾರೆ. ಈ ಮೂಲಕ ಉರಿಗೌಡ-ನಂಜೇಗೌಡ ವಿವಾದಿತ ಚಲನಚಿತ್ರದ ಗೊಂದಲಗಳಿಗೆ ತೆರೆಬಿದ್ದಂತಾಗಿದೆ.

    ಉರಿಗೌಡ-ನಂಜೇಗೌಡ ಸಿನಿಮಾ ನಿರ್ಮಾಣ ಮಾಡುವ ಆಲೋಚನೆ ಇರಲಿಲ್ಲ. ಆದರೆ ಎಚ್​.ಡಿ.ಕುಮಾರಸ್ವಾಮಿ ಅವರ ಹೇಳಿಕೆಯ ಕಾರಣಕ್ಕೆ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದೆ. ಆದರೆ ನಿರ್ಮಲಾನಂದ ಶ್ರೀಗಳ ಜತೆಗಿನ ಚರ್ಚೆಯ ವೇಳೆ ಸಿನಿಮಾ ನಿರ್ಮಾಣ ಮಾಡುವುದಿಲ್ಲ ಎಂದು ತಿಳಿಸಿದ್ದೇನೆ ಎಂದರು.

    ಉರಿಗೌಡ – ನಂಜೇಗೌಡ ಟೈಟಲ್ ರಿಜಿಸ್ಟರ್ ಆಗುತ್ತಿದ್ದಂತೆ ಮೇ 18 ರಂದು ಬೆಳಗ್ಗೆ 10 ಗಂಟೆಗೆ ಕಂಠೀರವ ಸ್ಟುಡಿಯೋನಲ್ಲಿ ಸಿನಿಮಾ ಮುಹೂರ್ತ ನಡೆಯಲಿದೆ ಎಂದು ಮುನಿರತ್ನ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಸಿನಿಮಾವನ್ನು ಸಚಿವ ಆರ್.ಅಶೋಕ್ ಹಾಗೂ ಸಿಟಿ ರವಿ ಪ್ರೆಸೆಂಟ್ಸ್ ಮಾಡಲು ಮುಂದಾಗಿದ್ದರು.

    ಇದನ್ನೂ ಓದಿ: 

    ಮುನಿರತ್ನ ತಮ್ಮ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡಲು ಮುಂದಾಗಿದ್ದರು. ಮುನಿರತ್ನ ಅವರು ಟೈಟಲ್​ಗೆ ಅರ್ಜಿ ಸಲ್ಲಿಸಿದ್ದರ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗಿತ್ತು. ಇದೇ ವೇಳೆ ಮುನಿರತ್ನ ಮಾತನಾಡುತ್ತಾ, ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದೇನೆ. ಅವರ ಬಳಿ ಚರ್ಚಿಸಿ ಸಿನಿಮಾ ನಿರ್ಮಾಣದ ವಿಚಾರದಲ್ಲಿ ಮುಂದುವರೆಯಲಿದ್ದೇನೆ ಎಂದು ಹೇಳಿದ್ದರು.

    ರಾಜ್ಯಕ್ಕೆ ಮಾಡಬೇಕಾಗಿರುವ ಸಾಕಷ್ಟು ಕೆಲಸ ಕಾರ್ಯಗಳನ್ನು ಹಿಂದಿಟ್ಟು, ಉರಿಗೌಡ-ನಂಜೇಗೌಡ ಎಂಬ ಪಾತ್ರಗಳನ್ನು ಮುಂದಿಟ್ಟು ಗೊಂದಲ ಸೃಷ್ಟಿ ಮಾಡುವುದು ಸರಿಯಲ್ಲ ಎಂಬುದನ್ನು ತಿಳಿಸಿದ್ದೇವೆ. ಇತಿಹಾಸದ ಹಿನ್ನೆಲೆಯನ್ನು ಸರಿಯಾಗಿ ಮನದಟ್ಟು ಮಾಡಿಕೊಟ್ಟಿರುವುದರಿಂದ ಸಿನಿಮಾ ವಿಚಾರವಾಗಿ ಸುಮ್ಮನಾಗಿದ್ದಾರೆ. ಕಲ್ಪನೆ ಮಾಡಿಕೊಂಡು ಬರೆಯುವುದು ಕಾದಂಬರಿಯಾಗುತ್ತದೆ. ಶಾಸನದ ಹಿನ್ನೆಲೆಯಲ್ಲಿ ಬರೆಯುವುದು ಮುಂದಿನ ಪೀಳಿಗೆಗೆ ಶಕ್ತಿಯಾಗುತ್ತದೆ ಎಂದು ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts