

ಅಮೆರಿಕ: ಅಮೆರಿಕದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯ (US Election Results) ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮುನ್ನಡೆ ಸಾಧಿಸಿದ್ದಾರೆ.
ಫ್ಲೋರಿಡಾ, ಇಂಡಿಯಾನಾ, ಕೆಂಟುಕಿ ಸೇರಿದಂತೆ 17 ರಾಜ್ಯಗಳಲ್ಲಿ ಟ್ರಂಪ್ ಗೆಲುವುದು ಸಾಧಿಸಿದ್ದು, ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ನ್ಯೂಯಾರ್ಕ್, ವರ್ಮೊಂಟ್ ಸೇರಿದಂತೆ 7 ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಮತಎಣಿಕೆ ಕಾರ್ಯ ಮುಂದುವರೆದಿದ್ದು, ಅಧಿಕೃತ ಮಾಹಿತಿ ಹೊರಬೀಳಬೇಕಿದೆ.
ಪೆನ್ಸಿಲ್ವೇನಿಯಾ, ಮಿಷಿಗನ್, ವಿಸ್ಕಾನ್‌ಸಿನ್, ನೆವಾಡ, ಅರಿಜೋನಾ, ಜಾರ್ಜಿಯಾ ಮತ್ತು ಉತ್ತರ ಕೆರೊಲಿನಾ ರಾಜ್ಯಗಳಲ್ಲಿ ಕಮಲಾ ಹ್ಯಾರಿಸ್ ಮತ್ತು ಡೊನಾಲ್ಡ್ ಟ್ರಂಪ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದ್ದು, ಈ ಏಳು ರಾಜ್ಯಗಳು ಟ್ರಂಪ್ ಹಾಗೂ ಹ್ಯಾರಿಸ್ಗೆ ನಿರ್ಣಾಯಕವಾಗಿದೆ.