ಬೆಂಗಳೂರಿನಲ್ಲಿ ಶೀಘ್ರವೇ ಅಮೆರಿಕ ರಾಯಭಾರಿ ಕಚೇರಿ ಆರಂಭ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬೆಂಗಳೂರಿನಲ್ಲಿ ಅಮೆರಿಕ ರಾಯಭಾರಿ ಕಚೇರಿಯನ್ನು ಆದ್ಯತೆ ಮೇರೆಗೆ ಆರಂಭಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನವದೆಹಲಿಯಲ್ಲಿರುವ ಭಾರತದಲ್ಲಿನ ಅಮೆರಿಕ ಸಂಯುಕ್ತ ಸಂಸ್ಥಾನಗಳ ರಾಯಭಾರಿ ಎರಿಕ್ ಗಾರ್ಸೆಟಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ಅನಸ್ತೇಶಿಯಾಕ್ಕೆ ಮಹಿಳಾ ಅಧಿಕಾರಿ ಬಲಿ; ಸಿಬಿಐ ತನಿಖೆಗೆ ಆಗ್ರಹಿಸಿದ ಕುಟುಂಬ

ಸಚಿವ ಪ್ರಿಯಾಂಕ್ ಖರ್ಗೆ ಅವರು ನವದೆಹಲಿಯ ಯುಎಸ್ ರಾಯಭಾರ ಕಚೇರಿಯಲ್ಲಿ ರಾಯಭಾರಿ ಎರಿಕ್ ಗಾರ್ಸೆಟಿ ಅವರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಯುಎಸ್ ರಾಯಭಾರಿ ಕಚೇರಿಯನ್ನು ಆರಂಭಿಸುವುದು ಸೇರಿದಂತೆ, ಕರ್ನಾಟಕದಲ್ಲಿ ಯುಎಸ್ ಬಂಡವಾಳ ಹೂಡಿಕೆ, ತಂತ್ರಜ್ಞಾನ ವಿನಿಮಯ ಸೇರಿದಂತೆ ಕೆಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆಯಿಂದ ಯುಎಸ್ ಪಯಣ ಬೆಳೆಸುವವರು ಈಗ ಚೆನ್ನೈಗೆ ಹೋಗಬೇಕಿದೆ, ರಾಜ್ಯದ ನಾಗರಿಕರಿಗೆ ಅನುಕೂಲ ಕಲ್ಪಸುವ ಸಲುವಾಗಿ ಈಗಾಗಲೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಅಮೆರಿಕ ರಾಯಭಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ ಎಂದು ಹೇಳಿದ ಪ್ರಿಯಾಂಕ್ ಖರ್ಗೆ ಅವರು ಈ ಸಂಬಂಧ ರಾಜ್ಯದ ಮುಖ್ಯಮಂತ್ರಿಗಳು ಬರೆದಿದ್ದ ಪತ್ರವನ್ನು ರಾಯಭಾರಿ ಎರಿಕ್ ಗಾರ್ಸೆಟಿ ಅವರಿಗೆ ಹಸ್ತಾಂತರಿಸಿದರು.

ಅಮೆರಿಕದಲ್ಲಿ ಈಗ ಅಧ್ಯಕ್ಷರ ಚುನಾವಣೆಯಲ್ಲಿ ಅಲ್ಲಿನ ಸರ್ಕಾರ ನಿರತವಾಗಿದೆ, ಚುನಾವಣೆ ಮುಗಿದ ಕೂಡಲೇ ಆದ್ಯತೆಯ ಮೇರೆಗೆ ಬೆಂಗಳೂರಿನಲ್ಲಿ ರಾಯಭಾರ ಕಚೇರಿಯನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಯಭಾರಿ ಎರಿಕ್ ಗಾರ್ಸೆಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಹೇಳಿದರು. ಬೆಂಗಳೂರಿನಲ್ಲಿ ಯುಎಸ್ ರಾಯಭಾರಿ ಕಚೇರಿ ಆರಂಭವಾಗುವ ಕನ್ನಡಿಗರ ಬಹು ದಿನಗಳ ಕನಸು ಶೀಘ್ರದಲ್ಲೇ ಸಾಕಾರಗೊಳ್ಳಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

4 ರಿಂದ 5 ಲಕ್ಷ ಜನರಿಗೆ ಅನುಕೂಲ: ಸಂಸದ ತೇಜಸ್ವಿ ಸೂರ್ಯ

ಬೆಂಗಳೂರಿನಲ್ಲಿ ಅಮೆರಿಕ ರಾಯಭಾರಿ ಕಚೇರಿ ಆರಂಭವಾಗುತ್ತಿರುವುದರಿಂದ 4 ರಿಂದ 5 ಲಕ್ಷ ಜನರಿಗೆ ಅನುಕೂಲ ಆಗಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ಈ ಹಿಂದೆ ಹೇಳಿದ್ದರು. ಅಮೆರಿಕ ರಾಯಭಾರಿ ಕಚೇರಿ ಬೆಂಗಳೂರಿನಲ್ಲಿ ಆರಂಭಿಸಲು ಅಮೆರಿಕದ ಅಧಿಕಾರಿಗಳಿಗೆ ಹಿಂದಿನ ಸರ್ಕಾರ ಕೊಟ್ಟ ಭರವಸೆಯನ್ನು ಇವಾಗ ಕಾಂಗ್ರೆಸ್ ಉಳಿಸಿಕೊಳ್ಳಬೇಕು. ಆದಷ್ಟು ಬೇಗ‌ ರಾಯಭಾರಿ ಕಚೇರಿ ಆರಂಭವಾಗಲು ಸಹಕಾರ ಕೊಡಬೇಕು ಎಂದಿದ್ದರು.

Breaking News | ತಿರುಪತಿ ಲಡ್ಡುಗೆ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿದ್ದು ಕನ್ಫರ್ಮ್! ಸಾಕ್ಷ್ಯ ಮುಂದಿಟ್ಟ ಟಿಡಿಪಿ!

Share This Article

Bathing : ನೀರಿನಲ್ಲಿ ಇವುಗಳನ್ನು ಬೆರೆಸಿ ಸ್ನಾನ ಮಾಡಿದ್ರೆ ಸಾಕು ಅದೃಷ್ಟ ಖುಲಾಯಿಸುತ್ತದೆ…

ಬೆಂಗಳೂರು: ಪ್ರತಿದಿನ ಸ್ನಾನ ( Bathing ) ಮಾಡುವ ಅಭ್ಯಾಸವನ್ನು ಸಾಮಾನ್ಯವಾಗಿ ಎಲ್ಲರೂ ರೂಢಿಸಿಕೊಂಡಿರುತ್ತಾರೆ. ನೀವು…

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…