More

    ದೆಹಲಿಯಲ್ಲಿನ ಸರ್ಕಾರಿ ಶಾಲೆಗೆ ಭೇಟಿ ನೀಡಲಿದ್ದಾರೆ ಮೆಲಾನಿಯಾ ಟ್ರಂಪ್​: ಕೇಜ್ರಿವಾಲ್​ರ ಹ್ಯಾಪಿನೆಸ್​ ಕ್ಲಾಸ್​ನಲ್ಲೂ ಭಾಗವಹಿಸ್ತಾರೆ!

    ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಹಾಗೂ ಮೆಲಾನಿಯಾ ಟ್ರಂಪ್​ ಫೆ.24-25ರಂದು ಭಾರತಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ. ಇದೇ ಸಮಯದಲ್ಲಿ ಮೆಲಾನಿಯಾ ಟ್ರಂಪ್​ ದೆಹಲಿಯ ಸರ್ಕಾರಿ ಶಾಲೆಗೆ ಭೇಟಿ ನೀಡಲಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ ಆರಂಭಿಸಿರುವ ಹ್ಯಾಪಿನೆಸ್​ ಕ್ಲಾಸ್​ನಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

    ಫೆ.24ರಂದು ಟ್ರಂಪ್​ ಮತ್ತು ಮೆಲಾನಿಯಾ ಟ್ರಂಪ್​ ಭಾರತಕ್ಕೆ ಬಂದಿಳಿಯಲಿದ್ದಾರೆ. ಅಂದು ಅಹಮದಾಬಾದ್​ನ ಮೊಟೆರಾದಲ್ಲಿರುವ ನೂತನ ಕ್ರಿಕೆಟ್​ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದು ಅಲ್ಲಿಂದ ಆಗ್ರಾಕ್ಕೆ ತೆರಳಲಿದ್ದಾರೆ. ಆಗ್ರಾದಿಂದ ದೆಹಲಿಗೆ ಬರುವ ಟ್ರಂಪ್​ ದಂಪತಿ ರಾಷ್ಟ್ರಪತಿ ಭವನದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಪ್ರಧಾನಿ ಮೋದಿ ಮತ್ತು ಟ್ರಂಪ್​ ಸಭೆ ನಡೆಸಲಿದ್ದಾರೆ. ಆ ಸಮಯದಲ್ಲಿ ಮೆಲಾನಿಯಾ ಟ್ರಂಪ್​ ದೆಹಲಿಯ ಸರ್ಕಾರಿ ಶಾಲೆಗೆ ಭೇಟಿ ನೀಡಲಿದ್ದಾರೆ.

    ಮೆಲಾನಿಯಾ ಟ್ರಂಪ್​ ಭೇಟಿ ನೀಡಲಿರುವ ಶಾಲೆಯಲ್ಲಿ ಮೆಲಾನಿಯಾ ಸ್ವಾಗತಕ್ಕೆಂದು ಭರ್ಜರಿ ತಯಾರಿ ನಡೆಸಲಾಗುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಮತ್ತು ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಮೆಲಾನಿಯಾರನ್ನು ಸ್ವಾಗತ ಮಾಡಿಕೊಳ್ಳಲಿದ್ದಾರೆ.

    ದೆಹಲಿ ಸರ್ಕಾರಿ ಶಾಲೆಗೆ ಭೇಟಿ ನೀಡುವ ಮೆಲಾನಿಯಾ ಆ ಶಾಲೆಯಲ್ಲಿ ಹ್ಯಾಪಿನೆಸ್​ ಕ್ಲಾಸ್​ನಲ್ಲಿ ಪಾಲ್ಗೊಳ್ಳಲಿದ್ದಾರೆ. ಪಠ್ಯೇತರ ಚಟುವಟಿಕೆಗಳಿಂದ ಶಾಲೆಯ ಮಕ್ಕಳನ್ನು ಯಾವ ರೀತಿಯಲ್ಲಿ ಆ್ಯಕ್ಟಿವ್​ ಮಾಡಲಾಗುತ್ತದೆ ಎನ್ನುವುದನ್ನು ನೋಡಲಿದ್ದಾರೆ. ಸುಮಾರು ಒಂದು ಗಂಟೆಯ ಕಾಲ ಮೆಲಾನಿಯಾ ಸರ್ಕಾರಿ ಶಾಲೆಯಲ್ಲಿ ಕಾಲ ಕಳೆಯಲಿದ್ದಾರೆ ಎನ್ನಲಾಗಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts