More

    ಯುಎಸ್ ಓಪನ್ ಆರಂಭಕ್ಕೂ ಮುನ್ನವೇ ಪ್ರೇಕ್ಷಕರಿಗೆ ಶಾಕ್ ಕೊಟ್ಟ ಆಯೋಜಕರು..!

    ನ್ಯೂಯಾರ್ಕ್: ಪ್ರತಿಷ್ಠಿತ ಯುಎಸ್ ಓಪನ್ ಗ್ರಾಂಡ್ ಸ್ಲಾಂ ಟೆನಿಸ್ ಟೂರ್ನಿ ಆರಂಭಕ್ಕೆ ಕೇವಲ ಒಂದು ದಿನ ಬಾಕಿ ಇರುವಾಗ ಕೋವಿಡ್ ಮಾರ್ಗಸೂಚಿಯಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ಟೂರ್ನಿ ವೀಕ್ಷಿಸಲು ಆಗಮಿಸುವ ಪ್ರೇಕ್ಷಕರು ಕನಿಷ್ಠ ಒಂದು ಡೋಸ್ ಲಸಿಕೆ ಪಡೆದ ಪ್ರಮಾಣ ಪತ್ರವನ್ನು ತೋರಿಸಬೇಕಿದೆ. ನ್ಯೂಯಾರ್ಕ್ ಸಿಟಿ ಮೇಯರ್ ಕಚೇರಿಯಿಂದ ಈ ನಿಯಮ ಹೊರಡಿಸಲಾಗಿದ್ದು, ಲಸಿಕೆ ಪಡೆದ ಪ್ರಮಾಣ ಪತ್ರ ತೋರಿಸುವುದು ಕಡ್ಡಾಯಮಾಡಲಾಗಿದೆ ಎಂದು ಯುಎಸ್ ಟೆನಿಸ್ ಸಂಸ್ಥೆ ಶುಕ್ರವಾರ ತಿಳಿಸಿದೆ.

    ಇದನ್ನೂ ಓದಿ: ಆಶಸ್ ಸರಣಿಗೆ ಇಂಗ್ಲೆಂಡ್ ಆಟಗಾರರ ಸಾಮೂಹಿಕ ಬಹಿಷ್ಕಾರ ?

    ಈ ಬಾರಿಯ ಟೂರ್ನಿ ವೀಕ್ಷಿಸಲು ಶೇಕಡ 100 ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ. ಕಳೆದ ಬಾರಿ ಕೋವಿಡ್‌ನಿಂದಾಗಿ ಖಾಲಿ ಸ್ಟೇಡಿಯಂನಲ್ಲಿ ಪಂದ್ಯಗಳು ನಡೆದಿದ್ದವು. ಸೋಮವಾರದಿಂದ ಟೂರ್ನಿ ಆರಂಭಗೊಳ್ಳಲಿದೆ. ೆಟೋ ಕಾಪಿ ಜತೆಗೆ ಬರಬೇಕು ಎಂದು ತಿಳಿಸಲಾಗಿದೆ. ಇದಕ್ಕೂ ಮೊದಲು ಪ್ರೇಕ್ಷಕರಿಗೆ ಲಸಿಕೆಯ ಪ್ರಮಾಣ ಪತ್ರದ ಅವಶ್ಯಕತೆ ಇಲ್ಲ ಎಂದು ಯುಎಸ್‌ಟಿಎ ಹೇಳಿತ್ತು. ದಿನದಿಂದ ದಿನಕ್ಕೆ ಹೊಸ ಪ್ರಕರಣಗಳು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಯುಎಸ್‌ಟಿಎ ಈ ಕ್ರಮ ಅನುಸರಿಸಿದೆ ಎಂದು ಹೇಳಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts