ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ತೀವ್ರ ಉಸಿರಾಟದ ತೊಂದರೆ...!

Trump
Published on

ವಾಷಿಂಗ್ಟನ್: ಕರೊನಾ ಪಾಸಿಟಿವ್ ಆಗಿ ಆಸ್ಪತ್ರೆಗೆ ದಾಖಲಾಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದೆ.

ಅದಲ್ಲದೆ ತೀವ್ರ ಜ್ವರ, ಕೆಮ್ಮು, ಸುಸ್ತು ಕೂಡ ಕಾಣಿಸಿಕೊಂಡಿದೆ ಎಂದು ಸಿಎನ್‌ಎನ್ ವರದಿ ಮಾಡಿದೆ. ಕರೊನಾ ಪಾಸಿಟಿವ್ ದೃಢಪಟ್ಟ ಕೂಡಲೇ ಟ್ರಂಪ್ ಅವರಿಗೆ ವೈಟ್‌ಹೌಸ್‌ನಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ನೆ ಅವರನ್ನು ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಅವರ ಪತ್ನಿ ಮೆಲನಿಯಾ ಅವರಿಗೂ ಕರೊನಾ ಪಾಸಿಟಿವ್ ದೃಢಪಟ್ಟಿದೆ. ಅಧ್ಯಕ್ಷೀಯ ಚುನಾವಣೆ ಹತ್ತಿರ ಬಂದಿದ್ದರೂ ಕರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಟ್ರಂಪ್ ತಮ್ಮ ಎಲ್ಲ ಅಧಿಕೃತ ಕಾರ‌್ಯಕ್ರಮಗಳನ್ನು ರದ್ದುಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net