More

    ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ 2ನೇ ಹಾಗೂ ಕೊನೆ ದಿನದ ವೇಳಾಪಟ್ಟಿ ಹೀಗಿದೆ…

    ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರ ಎರಡು ದಿನಗಳ ಭಾರತ ಪ್ರವಾಸದಲ್ಲಿ ಒಂದು ದಿನ ಇಂದು ಮುಕ್ತಾಯವಾಗಿದೆ. ಮೊದಲ ದಿನವೇ ಸಬರಮತಿ ಆಶ್ರಮ, ನಮಸ್ತೆ ಟ್ರಂಪ್​ ಕಾರ್ಯಕ್ರಮ ಮತ್ತು ತಾಜ್​ ಮಹಲ್​ ಭೇಟಿ ನೀಡಿ ದೆಹಲಿಗೆ ತೆರಳಿದ ಟ್ರಂಪ್​ ಮಂಗಳವಾರ ರಾತ್ರಿ ಅಮೆರಿಕಕ್ಕೆ ಮರಳುವ ಮುನ್ನ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಅದರ ವೇಳಾಪಟ್ಟಿ ಈ ಕೆಳಕಂಡಂತಿದೆ.

    ಮಂಗಳವಾರ ಬೆಳಗ್ಗೆ 10 ಗಂಟೆ ಟ್ರಂಪ್ ಗೌರವಾರ್ಥ ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಬಳಿಕ 10:45ಕ್ಕೆ ರಾಜ್​ಘಾಟ್​ಗೆ ಟ್ರಂಪ್ ದಂಪತಿ ಭೇಟಿ ನೀಡಿ ಮಹಾತ್ಮ ಗಾಂಧಿ ಸಮಾಧಿಗೆ ಗೌರವ ಸಲ್ಲಿಸಲಿದ್ದಾರೆ. ಬಳಿಕ 11:30ಕ್ಕೆ ದೆಹಲಿಯ ಹೈದರಾಬಾದ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ರಂಪ್ ದ್ವಿಪಕ್ಷೀಯ ಮಾತುಕತೆ ನಂತರ ಜಂಟಿ ಸುದ್ದಿಗೋಷ್ಠಿ ನಡೆಯಲಿದೆ.

    ಇದರ ನಡುವೆ ದೆಹಲಿಯ ಸರ್ಕಾರಿ ಶಾಲೆಯೊಂದಕ್ಕೆ ಮೆಲನಿಯಾ ಟ್ರಂಪ್​ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಅಮೆರಿಕ ರಾಯಭಾರ ಕಚೇರಿಯಲ್ಲಿ ಸಿಇಒಗಳ ದುಂಡುಮೇಜಿನ ಸಭೆ ನಡೆಯಲಿದೆ. ಬಳಿಕ ಸಂಜೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರನ್ನು ಟ್ರಂಪ್​ ಭೇಟಿ ಮಾಡಲಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ರಾಷ್ಟ್ರಪತಿ ಭವನದಲ್ಲಿ ಔತಣಕೂಟದಲ್ಲಿ ಪಾಲ್ಗೊಂಡ ಬಳಿಕ ರಾತ್ರಿ 10ಕ್ಕೆ ಟ್ರಂಪ್​ ಅಮೆರಿಕಗೆ ನಿರ್ಗಮಿಸಲಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts