More

    ಭವಿಷ್ಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಕೃತಕ ಬುದ್ಧಿಮತ್ತೆ ಬಳಕೆ

    ಕೆ.ಎಂ.ದೊಡ್ಡಿ: ಮುಂದಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ ಎಲ್ಲ ಕ್ಷೇತ್ರಗಳಲ್ಲೂ ತನ್ನ ಛಾಪು ಮೂಡಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಭಾರತೀ ಎಜುಕೇಷನ್ ಟ್ರಸ್ಟ್ ಚೇರ‌್ಮನ್ ಮಧು ಜಿ.ಮಾದೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

    ಇಲ್ಲಿನ ಭಾರತೀ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಭಾರತೀ ಕಾಲೇಜಿನ(ಸ್ವಯತ್ತ) ರಾಸಾಯನ ಶಾಸ್ತ್ರ ವಿಭಾಗದ ಪದವಿ ಮತ್ತು ಸ್ನಾತಕೋತ್ತರ ವಿಭಾಗ ಮತ್ತು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ಹಾಗೂ ಭಾರತೀ ಕಾಲೇಜಿನ ಹಿರಿಯ ವಿದ್ಯಾರ್ಥಿ ಬಳಗ ವತಿಯಿಂದ ಆಯೋಜಿಸಿರುವ ರಾಷ್ಟ್ರ ಮಟ್ಟದ ಅಡ್ವಾನ್ಸ್‌ಮೆಂಟ್ ಕೆಮಿಸ್ಟ್ರಿ ಆ್ಯಂಡ್ ಮೆಡಿಷನಲ್ ಕೆಮಿಸ್ಟ್ರಿ’ ಕುರಿತ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

    ಕೃತಕ ಬುದ್ಧಿಮತ್ತೆ ವೈದ್ಯಕೀಯ, ಬಾಹ್ಯಕಾಶ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಸಾಮಾನ್ಯ ಮನುಷ್ಯ ಮಾಡಲು ಸಾಧ್ಯವಾಗದ ಕಷ್ಟಕರ ಕಾರ್ಯಗಳನ್ನು ಕೃತಕ ಬುದ್ಧಿ ಮತ್ತೆ ಬಹಳ ಸುಲಭವಾಗಿ ನಿರ್ವಹಿಸಲು ನೆರವಾಗುತ್ತದೆ ಎಂದರು.

    ಬಿಇಟಿ ಕಾರ್ಯದರ್ಶಿ ಬಿ.ಎಂ.ನಂಜೇಗೌಡ ಮಾತನಾಡಿ, ಭಾರತೀ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ ಸಾವಿರಾರು ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆ ಅಲಂಕರಿಸಿದ್ದಾರೆ ಎಂದರು. ಸಂಪನ್ಮೂಲ ವ್ಯಕ್ತಿಗಳಾದ ಮುಂಬೈನ ಜಿಪಿಡಿ ಮತ್ತು ಪಿಎಸ್‌ಎಚ್ ಕಂಪನಿಯ ಸಹಾಯಕ ನಿರ್ದೇಶಕ ಡಾ.ಎಚ್.ಶ್ರೀನಿವಾಸ್, ಬೆಂಗಳೂರಿನ ಸರ್ಕಾರಿ ಔಷಧ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಕೆ.ಸಿ.ಚಲುವರಾಜು, ಬೆಂಗಳೂರಿನ ಸಬ್‌ಟೈಲ್ ಸಂಸ್ಥೆಯ ಸಂಸ್ಥಾಪಕ ಡಾ.ಡಿ.ಬಿ.ಯೋಗೇಶ್ ಉಪನ್ಯಾಸ ನೀಡಿದರು.

    ಪ್ರಾಂಶುಪಾಲ ಪ್ರೊ.ಪಿ.ನಾಗೇಂದ್ರ ಅಧ್ಯಕ್ಷತೆ ವಹಿಸಿದ್ದರು. ಸ್ನಾತಕೋತ್ತರ ವಿಭಾಗದ ನಿರ್ದೇಶಕ ಪ್ರೊ.ಎಸ್.ನಾಗರಾಜು, ಭಾರತೀ ಹೆಲ್ತ್ ಸೈನ್ಸ್‌ನ ನಿರ್ದೇಶಕ ಡಾ.ತಮಿಜ್‌ಮಣಿ, ಕಾರ್ಯಕ್ರಮ ಸಂಯೋಜಕರಾದ ಪ್ರೊ.ಜಯರಾಮೇಗೌಡ, ರಾಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಎಸ್.ರೇವಣ್ಣ ಹಲವರಿದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts