More

    ಅನುದಾನ ಸಮರ್ಪಕವಾಗಿ ಬಳಕೆ ಮಾಡಿ

    ಮದ್ದೂರು: ಸರ್ಕಾರದ ಅನುದಾನವನ್ನು ಪೋಲು ಮಾಡದೆ ಸಮರ್ಪಕವಾಗಿ ಬಳಕೆ ಮಾಡಿ ತಾಲೂಕಿನ ಪ್ರಗತಿ ಸಾಧಿಸಲು ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಾಲೂಕು ಪಂಚಾಯಿತಿ ಆಡಳಿತ ಅಧಿಕಾರಿ ಸಂಜೀವರಾಯಪ್ಪ ಹೇಳಿದರು.

    ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಗುರುವಾರ ಮಾತನಾಡಿದರು.

    ಎಲ್ಲ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಲಾಗುತ್ತಿದ್ದು, ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ನಿರ್ದಿಷ್ಟ ಉದ್ದೇಶಗಳಿಗೆ ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು ಸರ್ಕಾರದ ಅನುದಾನ ಪೋಲಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಜಿಲ್ಲಾ ಪಂಚಾಯಿತಿ ಸಿಇಒ ತನ್ವೀರ್ ಆಸಿಫ್ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವೀಪ್ ಸಮಿತಿಯಲ್ಲಿ ಅತ್ಯುನ್ನತವಾಗಿ ಕಾರ್ಯ ನಿರ್ವಹಿಸಿದ್ದರು ಎಂಬ ಕಾರಣಕ್ಕೆ ರಾಜ್ಯ ಮತ್ತು ಭಾರತ ಚುನಾವಣಾ ಆಯೋಗ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿರುವುದು ಜಿಲ್ಲೆಗೆ ಹೆಮ್ಮೆ ತಂದಿದೆ ಎಂದು ಸಂತಷ ವ್ಯಕ್ತಪಡಿಸಿದರು.

    ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳು ನರೇಗಾ ಯೋಜನೆಯಲ್ಲಿ ಶೇ. 100ರಷ್ಟು ಗುರಿ ಸಾಧಿಸಬೇಕು. ಗುರಿ ಸಾಧಿಸದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ನಿರ್ದ್ಯಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಹಾಗೂ ನರೇಗಾ ಯೋಜನೆಯಲ್ಲಿ ಗ್ರಾಮಾಂತರ ಪ್ರದೇಶಗಳನ್ನು ಅಭಿವೃದ್ಧಿ ಮಾಡಲು ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.

    ತಾಪಂ ಇಒ ಎಲ್.ಸಂದೀಪ್ ಮಾತನಾಡಿ, ಬೇಸಿಗೆ ಈಗಾಗಲೇ ಪ್ರಾರಂಭವಾಗಿದ್ದು, ಕುಡಿಯುವ ನೀರಿಗೆ, ಜಾನುವಾರುಗಳಿಗೆ ಮೇವಿಗೆ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆೆ. ಪಶುಪಾಲನ ಇಲಾಖೆಯ ಅಧಿಕಾರಿಗಳು ಈಗಾಗಲೇ ಮೇವು ಇರುವ 18 ರೈತರನ್ನು ಗುರುತಿಸಿದ್ದು, ಅಗತ್ಯವಿದ್ದರೆ ಅವರಿಂದ ಮೇವು ಖರೀದಿಸುವ ಕೆಲಸವನ್ನು ಮಾಡಲಾಗುವುದು ಎಂದರು.

    ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಖಾಸಗಿ ಕೊಳವೆ ಬಾವಿಗಳ ಮಾಲೀಕರನ್ನು ಮನವೊಲಿಸುವ ಪ್ರಯತ್ನ ಮಾಡಲಾಗಿದ್ದು, ಕುಡಿಯುವ ನೀರಿಗೆ ಅಭಾವ ಉಂಟಾಗದಂತೆ ಕ್ರಮ ವಹಿಸಲಾಗುವುದು ಎಂದರು.

    ಬೇಸಿಗೆ ಸಮೀಪಿಸುತ್ತಿರುವುದರಿಂದ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರು, ಮೇವು, ಮೂಲ ಸೌಕರ್ಯ ಒದಗಿಸಲು ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಉಳಿದುಕೊಂಡು ಕಾರ್ಯನಿರ್ವಹಿಸಬೇಕು. ಈಗಾಗಲೇ ಈ ಬಗ್ಗೆ ಮೇಲಾಧಿಕಾರಿಗಳು ನಮಗೆ ನಿರ್ದೇಶನ ನೀಡಿದ್ದು ಅದರಂತೆ ಕ್ರಮವಹಿಸುತ್ತೇವೆ ಎಂದರು.

    ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ರೈತರಿಗೆ ಮತ್ತು ಸಾರ್ವಜನಿಕರಿಗೆ ತ್ವರಿತ ಗತಿಯಲ್ಲಿ ಕೆಲಸ ಮಾಡಿಕೊಡಬೇಕು. ಸಾರ್ವಜನಿಕರನ್ನು ಅನಗತ್ಯವಾಗಿ ಅಲೆದಾಡಿಸುವುದು ಕಂಡು ಬಂದರೆ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದು ಎಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

    ತಾಪಂ ಇಒ ಎಲ್. ಸಂದೀಪ್, ನರೇಗಾ ಸಹಾಯಕ ನಿರ್ದೇಶಕ ಟಿ.ವಿ.ಮಂಜುನಾಥ, ತಾಲೂಕು ಮಟ್ಟದ ಅಧಿಕಾರಿಗಳಾದ ಸಿ.ನಾಗಲಕ್ಷ್ಮೀ, ನಾರಾಯಣ, ಪ್ರಕಾಶ್, ಕೋದಂಡರಾಮ, ಬಸವರಾಜು, ಪರಮೇಶ್, ಡಾ.ರವೀಂದ್ರ ಬಿ.ಗೌಡ, ಮಂಗಳಮ್ಮ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts