More

    ಉದ್ಯೋಗ ಶೋಧಕ್ಕೆ ಯುವನಿ ಬಳಸಿಕೊಳ್ಳಿ

    ಚಿಕ್ಕಮಗಳೂರು: ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವಜನರು ಯುವನಿ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಕಾರಿ ಮೀನಾ ನಾಗರಾಜ್ ಸಲಹೆ ನೀಡಿದರು.

    ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಮಂಗಳವಾರ ಯುವನಿ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಡಿಪ್ಲೊಮಾ ಅಥವಾ ಪದವಿ ಮುಗಿಸಿದ ತಕ್ಷಣ ಉದ್ಯೋಗ ಸಿಗುವುದು ಕಷ್ಟ. ಯುವನಿ ಯೋಜನೆಯಡಿ ದೊರಕುವ ನಿರುದ್ಯೋಗ ಭತ್ಯೆಯನ್ನು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು, ಕೌಶಲ ತರಬೇತಿ ಪಡೆಯಲು, ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧರಾಗಲು ಬಳಸಿಕೊಳ್ಳಬೇಕು ಎಂದು ತಿಳಿಸಿದರು.
    2022-23ನೇ ಶೈಕ್ಷಣಿಕ ಸಾಲಿನ 2023ರಲ್ಲಿ ಪದವಿ ಅಥವಾ ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಕನಿಷ್ಠ 6 ತಿಂಗಳ ಅವಯೊಳಗೆ ಸರ್ಕಾರಿ ಅಥವಾ ಖಾಸಗಿ ಉದ್ಯೋಗ ಇಲ್ಲದವರು, ಸ್ವಯಂ ಉದ್ಯೋಗ ಇಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೆ ಇರುವವರು, ಕರ್ನಾಟಕದಲ್ಲಿ ವಾಸವಿರುವವರು ಮಾತ್ರ ಅರ್ಜಿ ಸಲ್ಲಿಸಬಹುದು ಎಂದರು.
    ಯೋಜನೆಯ ಸೌಲಭ್ಯ ಪಡೆಯಲು ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ ಮೂಲಕ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಸಹಾಯವಾಣಿ: 18005999918ನ್ನು ಸಂಪರ್ಕಿಸಬಹುದು ಎಂದು ಹೇಳಿದರು.
    ಅಪರ ಜಿಲ್ಲಾಕಾರಿ ನಾರಾಯಣ ಕನಕ ರಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸೋಮಶೇಖರ್, ಐಡಿಎಸ್‌ಜಿ ಕಾಲೇಜಿನ ಪ್ರಾಚಾರ್ಯೆ ಚಾಂದನಿ, ಕೌಶಲ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಪ್ರಶಾಂತ್, ಜಿಲ್ಲಾ ಉದ್ಯೋಗಾಕಾರಿ ಮಂಜುನಾಥ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts