More

    ಸದನಕ್ಕೆ ಅಪರಿಚಿತ ವ್ಯಕ್ತಿ ಪ್ರವೇಶ; ವಿಧಾನಸೌಧ, ರಾಜಭವನಕ್ಕೆ ಹೊಸ ಭದ್ರತಾ ವ್ಯವಸ್ಥೆ: ಯು.ಟಿ. ಖಾದರ್​

    ಬೆಂಗಳೂರು: ವಿಧಾನಸೌಧ, ಶಾಸಕರ ಭವನ, ರಾಜಭವನಕ್ಕೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಹೊಸ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್​​ ಸದನಕ್ಕೆ ತಿಳಿಸಿದ್ದಾರೆ.

    ಶುಕ್ರವಾರ ಬಜೆಟ್​ ಮಂಡನೆ ವೇಳೆ ಆದ ಲೋಪ ದೋಷದ ಕುರಿತು ಮಾತನಾಡುವ ವೇಳೆ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್​ ಸದನಕ್ಕೆ ಮಾಹಿತಿ ನೀಡಿದ್ದಾರೆ.

    ಶುಕ್ರವಾರ ಬಜೆಟ್​ ಮಂಡನೆ ವೇಳೆ ತಿಪ್ಪೇರುದ್ರಪ್ಪ(76) ಎಂಬ ವ್ಯಕ್ತಿಯೋರ್ವ ದೇವದುರ್ಗ ವಿಧಾನಸಭೆ ಕ್ಷೇತ್ರದ ಜೆಡಿಎಸ್​ ಶಾಸಕಿ ಕರೆಮ್ಮ ನಾಯಕ್​ ಅವರ ಆಸನದಲ್ಲಿ ಕುಳಿತುಕೊಂಡಿದ್ದ. ಬಳಿಕ ಇದನ್ನು ಗಮನಿಸಿದ ಗುರುಮಠಕಲ್​ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ್​ ಈ ವಿಚಾರವನ್ನು ನನ್ನ ಹಾಗೂ ಮಾರ್ಷಲ್​ಗಳ ಗಮನಕ್ಕೆ ತಂದಿದ್ದಾರೆ.

    VidhanaSoudha Rajbhavan

    ಇದನ್ನೂ ಓದಿ: ಟೊಮ್ಯಾಟೊ ಕಾಯಲು ಬೌನ್ಸರ್ ನೇಮಿಸಿ ಪೇಚಿಗೆ ಸಿಲುಕಿದ ತರಕಾರಿ ವ್ಯಾಪಾರಿ

    ಕೂಡಲೇ ಆ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ಶಾಸಕನಲ್ಲ ಎಂದು ಬೆಳಕಿಗೆ ಬಂದಿದೆ. ಇಂತಹ ಲೋಪಗಳನ್ನು ತಡೆಯಲು ಅತ್ಯಾಧುನಿಕ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ವಿಧಾನಸೌಧ, ಶಾಸಕರ ಭವನ, ರಾಜಭವನಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗುವುದು.

    ಇನ್ನು ಮುಂದೆ ನಾನು ಸೇರಿದಂತೆ ಎಲ್ಲಾ ಶಾಸಕರು ಗುರುತಿನ ಚೀಟಿಯನ್ನು ತೋರಿಸಿ ಸದನವನ್ನು ಪ್ರವೇಶಿಸಬೇಕು. ಈ ವಿಚಾರದಲ್ಲಿ ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ಎಲ್ಲರೂ ಸಹಕಾರ ನೀಡಬೇಕು ಎಂದು ವಿಧಾನಸಭೆ ಸ್ಪೀಕರ್​ ಯು.ಟಿ. ಖಾದರ್​ ಸದನಕ್ಕೆ ವಿನಂತಿಸಿಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts