More

    ಎಸ್‌ಸಿಪಿ, ಟಿಎಸ್‌ಪಿ ಅನುದಾನ ಸಂಪೂರ್ಣ ಬಳಸಿ

    ರಾಯಚೂರು: ಇಲಾಖೆ ಅಕಾರಿಗಳು ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪಯೋಜನೆ ಅನುಷ್ಠಾನಕ್ಕೆ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಹಾಗೂ ಸಂಪೂರ್ಣವಾಗಿ ಬಳಕೆ ಮಾಡಿಕೊಳ್ಳಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಸೂಚಿಸಿದರು.
    ಸ್ಥಳೀಯ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಿಶಿಷ್ಟ ಜಾತಿ ಹಾಗೂ ಪಂಗಡದ ಲಾನುಭವಿಗಳಿಗೆ ಯೋಜನೆಯ ಸೌಲಭ್ಯವನ್ನು ಒದಗಿಸಲು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.
    ಇಲಾಖೆಗೆ ಬರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಯೋಜನೆಯಡಿ ಕೈಗೊಂಡ ಕಾಮಗಾರಿಗಳು ಪೂರ್ಣಗೊಂಡ ನಂತರ ಸಂಬಂಧಪಟ್ಟ ಇಲಾಖೆಯಿಂದ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕು. ಅನುದಾನವನ್ನು ಶೇ.100ರಷ್ಟು ಬಳಕೆ ಮಾಡಿಕೊಳ್ಳಬೇಕು ಎಂದು ರಾಹುಲ್ ತುಕಾರಾಮ್ ಪಾಂಡ್ವೆ ತಿಳಿಸಿದರು.
    ಸಭೆಯಲ್ಲಿ ಅಪರ ಜಿಲ್ಲಾಕಾರಿ ಅಶೋಕ ದುಡಗುಂಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಗದೀಶ ಗಂಗಣ್ಣನವರ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್.ದೇವಿಕಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ಜಿಲ್ಲಾ ಕಾರ್ಮಿಕ ಇಲಾಖೆ ಆರತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನಕುಮಾರ, ಜೆಸ್ಕಾ ಅೀಕ್ಷಕ ಇಂಜಿನಿಯರ್ ಚಂದ್ರಶೇಖರ ದೇಸಾಯಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts