More

    ಕರೊನಾ: ಉತ್ತರ ಪ್ರದೇಶದಲ್ಲಿ 10 ನೇ ತರಗತಿ ಪರೀಕ್ಷೆಗಳು ರದ್ದು, 12 ನೇ ತರಗತಿಗೆ ಒಂದೂವರೆ ಗಂಟೆ ಮಾತ್ರ ಪರೀಕ್ಷೆ

    ಲಕ್ನೋ: ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ಪ್ರದೇಶದ 10 ನೇ ತರಗತಿಯ ಪರೀಕ್ಷೆಗಳನ್ನು (ಬೋರ್ಡ್​ ಎಕ್ಸಾಮ್ಸ್​) ರದ್ದು ಮಾಡಲಾಗಿದೆ.

    ಉತ್ತರ ಪ್ರದೇಶ ಸೆಕೆಂಡರಿ ಎಜುಕೇಷನ್ ಕೌನ್ಸಿಲ್ ಈ ನಿರ್ಧಾರ ಪ್ರಕಟಿಸಿದೆ. ಇನ್ನು 12 ನೇ ತರಗತಿ ಪರೀಕ್ಷೆಗಳನ್ನು ಕೇವಲ 90 ನಿಮಿಷ (ಪ್ರತಿ ಪರೀಕ್ಷೆ) ನಡೆಸಲು ತೀರ್ಮಾನಿಸಲಾಗಿದೆ. ಸಾಧ್ಯವಾದರೆ ಜುಲೈನಲ್ಲಿ ಈ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ.

    ಹತ್ತನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದ್ದರಿಂದ 29.90 ಲಕ್ಷ ವಿದ್ಯಾರ್ಥಿಗಳು ನೇರವಾಗಿ ಮುಂದಿನ ತರಗತಿ ಪ್ರವೇಶಕ್ಕೆ ಅರ್ಹತೆ ಪಡೆಯಲಿದ್ದಾರೆ ಎಂದು ಉತ್ತರ ಪ್ರದೇಶ ಡಿಸಿಎಂ ಸಹ ಆಗಿರುವ ಶಿಕ್ಷಣ ಸಚಿವ ದಿನೇಶ್ ಶರ್ಮಾ ಹೇಳಿದ್ದಾರೆ.

    ಇದನ್ನೂ ಓದಿ: ಕೋವಿಡ್​ನಿಂದ ಅನಾಥರಾದ ಮಕ್ಕಳಿಗೆ ಮಾಸಾಶನ, ಉಚಿತ ಶಿಕ್ಷಣ, ಆರೈಕೆ: ಬಾಲಸೇವಾ ಯೋಜನೆ ಘೋಷಿಸಿದ ಸಿಎಂ

    ಕೇಂದ್ರದ ಸಿಬಿಎಸ್​ಸಿ ಕೂಡ ದೇಶಾದ್ಯಂತ ಹತ್ತನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶರ್ಮಾ ಹೇಳಿದ್ದಾರೆ.

    ಇನ್ನೊಂದೆಡೆ ಉತ್ತರ ಪ್ರದೇಶದಲ್ಲಿ ಶನಿವಾರ ಹೊಸದಾಗಿ 2204 ಜನರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. 159 ಜನ ಮೃತಪಟ್ಟಿದ್ದಾರೆ. ಒಟ್ಟು 20 ಸಾವಿರ ಜನ ಮೃತಪಟ್ಟಿದ್ದಾರೆ. ಒಟ್ಟು 16,86,138 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

    ಕೋವಿಡ್​ನಿಂದ ಅನಾಥರಾದ ಮಕ್ಕಳಿಗೆ ಸಿಗಲಿದೆ 10 ಲಕ್ಷ ರೂಪಾಯಿ!; ಅಪ್ಪ-ಅಮ್ಮನಿಲ್ಲದ ಮಕ್ಕಳಿಗಾಗಿ ಪಿಎಂ ಕೇರ್ಸ್​

    ಎಂಟು‌ ಸಾವಿರ ಶಿಕ್ಷಕರಿಗೆ ಹಿಂಬಡ್ತಿ ಬಗ್ಗೆ ಯಾವುದೇ ಶಿಕ್ಷಕರು‌ ಆತಂಕ ಪಡಬೇಕಿಲ್ಲ: ಸಚಿವ ಸುರೇಶ್ ಕುಮಾರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts