More

    ಎಲ್ಲ ಸರ್ಕಾರಿ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಯ ರಜೆ ರದ್ದು!; ಎಲ್ಲಿ, ಯಾಕೆ?

    ಉತ್ತರಪ್ರದೇಶ: ರಾಜ್ಯದಲ್ಲಿನ ಎಲ್ಲ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಯ ರಜೆಗಳನ್ನು ರದ್ದುಗೊಳಿಸಲಾಗಿದೆ. ತುರ್ತು ವೈದ್ಯಕೀಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸರ್ಕಾರ ಇಂಥದ್ದೊಂದು ಆದೇಶವನ್ನು ಹೊರಡಿಸಿದೆ. ಅಂದಹಾಗೆ ಈ ರೀತಿ ವೈದ್ಯರ ಮತ್ತು ಅರೆವೈದ್ಯಕೀಯ ಸಿಬ್ಬಂದಿಯ ರಜೆ ರದ್ದುಗೊಳಿಸಿರುವುದು ಉತ್ತರಪ್ರದೇಶ ಸರ್ಕಾರ.

    ರಾಜ್ಯದಲ್ಲಿ ಎಲ್ಲ ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿ ರಜೆಗಳನ್ನು ಉತ್ತರ ಪ್ರದೇಶ ಸರ್ಕಾರ ಬುಧವಾರ ರದ್ದುಗೊಳಿಸಿದ್ದಾಗಿ ಅಲ್ಲಿನ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಟಕ್ ತಿಳಿಸಿದ್ದಾರೆ. ರಾಜ್ಯದಲ್ಲಿ ಡೆಂಘೆ ಹರಡುತ್ತಿರುವುದರ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ಉತ್ತರಪ್ರದೇಶದಲ್ಲಿ ಈ ವರ್ಷದ ಜನವರಿಯಿಂದ ಸೆಪ್ಟೆಂಬರ್ ವರೆಗಿನ ಅವಧಿಯಲ್ಲಿ 2,103 ಡೆಂಘೆ ಪ್ರಕರಣ ವರದಿಯಾಗಿದೆ. ಕಳೆದ ಸಲಕ್ಕೆ ಹೋಲಿಸಿದರೆ ಈ ಸಂಖ್ಯೆ ಕಡಿಮೆಯೇ. ಅದಾಗ್ಯೂ ಆಸ್ಪತ್ರೆಗಳಲ್ಲಿ ಹಾಸಿಗೆ ಕಾಯ್ದಿರಿಸಲಾಗಿದ್ದು, ಪ್ಲೇಟ್​ಲೆಟ್​ಗಳಿಗೂ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅದಾಗ್ಯೂ ಡೆಂಘೆ ಹರಡದಂತೆ ಕ್ರಮವಹಿಸಲು ಎಲ್ಲ ಸರ್ಕಾರಿ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯ ರಜೆ ರದ್ದುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ‘ಕಾಂತಾರ’ ಭರ್ಜರಿ ಯಶಸ್ಸು; ಕುತೂಹಲ ಕೆರಳಿಸಿದೆ ಇವರಿಬ್ಬರ ಮೌನ!

    ಸೀಟ್​ಬೆಲ್ಟ್​ ಧರಿಸದ್ದಕ್ಕೆ ದಂಡ ದುಪ್ಪಟ್ಟು; ಹೊಸ ಆದೇಶ ಜಾರಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts