More

  ಭೀಕರ ರಸ್ತೆ ಅಪಘಾತ; ಹಸೆಮಣೆ ಏರಬೇಕಿದ್ದ ವರ ಸೇರಿದಂತೆ ನಾಲ್ವರು ಸಜೀವ ದಹನ

  ಲಖನೌ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಸಮಣೆ ಏರಬೇಕಿದ್ದ ವರ ಸೇರಿದಂತೆ ಮೂವರು ಸಜೀವ ದಹನಗೊಂಡಿರುವ ಘಟನೆ ಉತ್ತರಪ್ರದೇಶದ ಕಾನ್ಪುರ-ಝಾನ್ಸಿ ಹೆದ್ದಾರಿಯಲ್ಲಿ ನಡೆದಿದೆ.

  ಘಟನೆಯಲ್ಲಿ ಆಕಾಶ್​ ಅಹಿರ್ವಾರ್​ (25), ಆಶಿಶ್​ ಅಹಿರ್ವಾರ್​ (20), ಕಾರಿನ ಚಾಲಕ ಜೈಕರಣ್​ ಹಾಗೂ 7 ವರ್ಷದ ಬಾಲಕ ಇಶು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  ಇದನ್ನೂ ಓದಿ: VIDEO| ಮಗಳ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ ತಾಯಿ; ವಿಡಿಯೋ ಮಾಡುತ್ತ ಕುಳಿತ ತಂದೆ

  ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮಧುಮಗನ ಮೆನಯಿಂದ ಸುಮಾರು 10 ಕಿಲೋಮೀಟರ್​ ದೂರದಲ್ಲಿ ಈ ಘಟನೆ ನಡೆದಿದ್ದು, ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕ್ಷಣಾರ್ಧದಲ್ಲೇ ಬೆಂಕಿ ಸಿಎನ್​ಜಿ ಟ್ಯಾಂಕ್​ಗೆ ತಗುಲಿದ್ದು, ಕಾರು ಹೊತ್ತಿ ಉರಿದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಪೈಕಿ ನಾಲ್ವರು ಸಜೀವ ದಹನಗೊಂಡಿದ್ದಾರೆ.

  ಕಾರಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಘಟನೆಯ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಆತನ ಹುಡುಕಾಟಕ್ಕಾಗಿ ವಿಶೇಷ ತಂಡ ರಚಿಸಲಾಗಿದ್ದು, ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts