More

    ಯುವತಿ ಕುಟುಂಬಕ್ಕೆ ನ್ಯಾಯ ಒದಗಿಸಲು ಅಖಿಲ ಭಾರತ ವಾಲ್ಮೀಕಿ ಮಹಾಸಭಾ ಒತ್ತಾಯ

    ಕೊಪ್ಪಳ: ಉತ್ತರ ಪ್ರದೇಶದಲ್ಲಿ ಯುವತಿ ಮೇಲಿನ ಅತ್ಯಾಚಾರ ಖಂಡಿಸಿ ಅಖಿಲ ಭಾರತ ವಾಲ್ಮೀಕಿ ಮಹಾಸಭಾದ ಜಿಲ್ಲಾ ಪದಾಧಿಕಾರಿಗಳು ಗುರುವಾರ ನಗದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

    ಯುವತಿ ಮೇಲೆ ಅತ್ಯಾಚಾರ ಎಸಗಿದ ನಾಲ್ವರು ಆಕೆಯ ನಾಲಿಗೆ ಕತ್ತರಿಸಿ, ಕೈಕಾಲು ಮುರಿದು ವಿಕೃತಿ ಮೆರೆದಿದ್ದಾರೆ. ಇದೊಂದು ಅಮಾನವೀಯ ಕೃತ್ಯವಾಗಿದ್ದು, ಮನುಕುಲವೇ ತಲೆ ತಗ್ಗಿಸುವಂತಾಗಿದೆ. ಘಟನೆ ಬಗ್ಗೆ ದೂರು ನೀಡಲು ಕುಟುಂಬದವರು ತೆರಳಿದಾಗ ಪೊಲೀಸರು ಅಸಹಕಾರ ತೋರಿರುವುದು ಖಂಡನೀಯ. ಯುವತಿ ಮೃತಪಟ್ಟಾಗ ರಾತ್ರೋರಾತ್ರಿ ಅಂತ್ಯಕ್ರಿಯೆ ನೆರವೇರಿಸಿರುವ ಪೊಲೀಸರ ನಡೆ ಸರಿಯಲ್ಲವೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

    ದೇಶದಲ್ಲಿ ನಿರಂತರವಾಗಿ ಮಹಿಳೆಯರ ಮೆಲೆ ಅತ್ಯಾಚಾರ, ದೌರ್ಜನ್ಯ ನಡೆಯುತ್ತಿವೆ. ಕಾನೂನು ಬಿಗಿಪಡಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಅತ್ಯಾಚಾರ ಎಸಗಿದವರನ್ನು ಗಲ್ಲಿಗೇರಿಸಬೇಕು. ಮಹಿಳೆಯರ ರಕ್ಷಣೆಗೆ ಇರುವ ಕಾನೂನುಗಳನ್ನು ಇನ್ನಷ್ಟು ಬಲಪಡಿಸಬೇಕು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ ಪ್ರಕರಣವನ್ನು ಗಂಭೀರವಾಗಿ ಪರಿಗಣೀಸಬೇಕು. ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ನೀಡಿ ಇತರರಿಗೆ ಎಚ್ಚರಿಕೆ ಸಂದೇಶ ರವಾನಿಸಬೇಕೆಂದು ಒತ್ತಾಯಿಸಿದರು. ಮಹಾಸಭಾ ತಾಲೂಕು ಅಧ್ಯಕ್ಷ ಶರಣಪ್ಪ ನಾಯಕ, ಜಿಲ್ಲಾ ಕಾರ್ಯದರ್ಶಿ ಶಿವಮೂರ್ತಿ, ರಾಜ್ಯ ಸಂಚಾಲಕ ಸುರೇಶ ಡೊಣ್ಣಿ, ಮುಖಂಡರಾದ ಹನುಮಂತ, ದೇವಪ್ಪ, ಪರಸಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts