More

    ಜಗತ್ತಿನ ಅದ್ಭುತಗಳಲ್ಲಿ ಒಂದಾದ ತಾಜ್​ ಮಹಲ್​ ಕಣ್ತುಂಬಿಕೊಳ್ಳಲು ಆಗ್ರಾಗೆ ಬಂದಿಳಿದ ಟ್ರಂಪ್​ ದಂಪತಿ!

    ನವದೆಹಲಿ: ಎರಡು ದಿನಗಳ ಭಾರತ ಪ್ರವಾಸದಲ್ಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅಹಮದಾಬಾದ್​ನಲ್ಲಿ ನಡೆದ “ನಮಸ್ತೆ ಟ್ರಂಪ್​” ಕಾರ್ಯಕ್ರಮವನ್ನು ಮುಗಿಸಿ ನೇರವಾಗಿ ತಮ್ಮ ಕುಟುಂಬ ಸಮೇತ ಜಗತ್ತಿನ ಅದ್ಭುತಗಳಲ್ಲಿ ಒಂದಾದ ತಾಜ್​ಮಹಲ್ ಅನ್ನು ಕಣ್ತುಂಬಿಕೊಳ್ಳಲು ಆಗ್ರಾಗೆ ಬಂದಿಳಿದರು.

    ಇಂದು ಬೆಳಗ್ಗೆಯಷ್ಟೇ ಅಹಮದಾಬಾದ್​ನ ಸರ್ದಾರ್​ ವಲ್ಲಭಭಾಯಿ ಪಟೇಲ್​ ವಿಮಾನ ನಿಲ್ದಾಣಕ್ಕೆ ಪತ್ನಿ ಮೆಲಾನಿಯಾ ಟ್ರಂಪ್​, ಪುತ್ರಿ ಇವಾಂಕ ಮತ್ತು ಅಳಿಯ ಜರೇದ್​ ಕುಶ್ನರ್​ ಹಾಗೂ ಅಮೆರಿಕ ನಿಯೋಗದೊಂದಿಗೆ ಅಧ್ಯಕ್ಷ ಟ್ರಂಪ್​ ಬಂದಿಳಿದರು. ಬಳಿಕ ಮೊಟೇರಾ ಕ್ರೀಡಾಂಗಣದಲ್ಲಿ ನಡೆದ ನಮಸ್ತೆ ಟ್ರಂಪ್​ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ತಾಜ್​ ಮಹಲ್ ನೋಡುವ ಇಂಗಿತವನ್ನು ಟ್ರಂಪ್​ ವ್ಯಕ್ತಪಡಿಸಿದ್ದರು.

    ಅದರಂತೆ ಅಹಮದಾಬಾದ್​ನಿಂದ ಕುಟುಂಬ ಸಮೇತ ತೆರಳಿದ ಟ್ರಂಪ್​ ಸಂಜೆ 4.20ರ ಹೊತ್ತಿಗೆ ಆಗ್ರಾಗೆ ಬಂದಿಳಿದರು. ಈ ವೇಳೆ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿ ಬೆನ್​ ಮತ್ತು ಮುಖ್ಯಮಂತ್ತಿ ಯೋಗಿ ಆದಿತ್ಯಾ ನಾಥ್​ ಟ್ರಂಪ್​ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಇದೇ ವೇಳೆ ಸಾಂಪ್ರದಾಯಿಕ ಕಲೆಗಳ ಮೂಲಕ ಟ್ರಂಪ್​ ದಂಪತಿಗೆ ಗೌರವ ಸಲ್ಲಿಸಿದರು. ಬಳಿಕ ಕಾರು ಹತ್ತಿ ಟ್ರಂಪ್​ ದಂಪತಿ ತಾಜ್​ ಮಹಲ್​ ಕಡೆ ಹೊರಟರು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts