

ಉತ್ತರ ಪ್ರದೇಶ: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದು ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಕಸ್ತೂರಬಾ ಗಾಂಧಿ ವಸತಿ ಶಾಲೆಯ ವಾಚ್ಮ್ಯಾನ್ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಈ ಗೊಂದಲದ ಘಟನೆಯು ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ಗಂಭೀರ ಕಳವಳಕ್ಕೆ ಕಾರಣವಾಗಿದೆ.
ಇದಲ್ಲದೆ ಅದೇ ವಾಚ್ಮ್ಯಾನ್ ವಿದ್ಯಾರ್ಥಿಗಳೊಂದಿಗೆ ನೃತ್ಯ ಮಾಡುತ್ತಿರುವ ಮತ್ತೊಂದು ವಿಡಿಯೋ ಮತ್ತೊಂದು ವಿಡಿಯೋ ಕೂಡ ವೈರಲ್ ಆಗಿದೆ. ಈ ಸಂಬಂಧ ಮೂಲ ಶಿಕ್ಷಣ ಅಧಿಕಾರಿ (ಬಿಇಒ) ಕೋಮಲ್ ಸಾಂಗ್ವಾನ್ ಅವರು ಪ್ರತಿಕ್ರಿಯೆ ನೀಡಿದ್ದು ಈ ಪ್ರಕರಣದ ಬಗ್ಗೆ ತ್ವರಿತವಾಗಿ ತನಿಖೆ ನಡೆಸಿ ಸಂಬಂಧಪಟ್ಟ ಎಲ್ಲರ ವಿರುದ್ಧ ಶೀಘ್ರ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಇದಲ್ಲದೆ, ವಾಚ್ಮನ್ ತನ್ನ ಫೋನ್ನಲ್ಲಿ ವಿದ್ಯಾರ್ಥಿಗಳಿಗೆ ಅನುಚಿತ ವಿಡಿಯೋಗಳನ್ನು ತೋರಿಸಿದ್ದ ಎಂಬ ಆರೋಪಗಳಿವೆ. ಆದಾಗ್ಯೂ, ಶಾಲೆಯ ವಾರ್ಡನ್ ಈ ವಿಡಿಯೋ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
ಪರಿಸ್ಥಿತಿಯ ಗಂಭೀರತೆಯನ್ನು ತಿಳಿಯಲು ಶಿಕ್ಷಣ ಅಧಿಕಾರಿ ಅವರು ಸಮಗ್ರ ತನಿಖೆಗಾಗಿ ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ತನಿಖೆಗೆ ವಹಿಸಿರುವುದಾಗಿ ತಿಳಿದುಬಂದಿದೆ. ವಿಡಿಯೋಗಳ ನಿಖರವಾದ ದಿನಾಂಕ ಮತ್ತು ಸಮಯ ತಿಳಿದುಬಂದಿಲ್ಲ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.