Uttar Pradesh | ಪ್ರವಾದಿ ಮುಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ನರಸಿಂಹಾನಂದ ಮಹರಾಜ್ ಬಂಧನ​!

UttarPradesh

ಉತ್ತರ ಪ್ರದೇಶ: ಪ್ರವಾದಿ ಮುಹಮ್ಮದ್ ಮತ್ತು ಕುರಾನ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ದಾಸ್ನಾ ದೇವಿ ದೇವಸ್ಥಾನದ ಪೀಠಾಧಿಪತಿ ಯತಿ ನರಸಿಂಹಾನಂದ ಮಹರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ನರಸಿಂಹಾನಂದ ಮಹರಾಹ್ ಅವರ ಹೇಳಿಕೆ ಖಂಡಿಸಿ ಉತ್ತರ ಪ್ರದೇಶದ ಹಲವು ನಗರಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನಾಕಾರರನ್ನು ಚದುರಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು.

ಇದನ್ನೂ ಓದಿ:  IndiGo Outage: ಇಂಡಿಗೋ ಏರ್‌ಲೈನ್ಸ್‌ನಲ್ಲಿ ಸರ್ವರ್‌ ಸಮಸ್ಯೆ; ದೇಶಾದ್ಯಂತ ಪ್ರಯಾಣಿಕರ ಪರದಾಟ

ನರಸಿಂಹಾನಂದ ವಿರುದ್ಧ ಈವರೆಗೆ ಹಲವು ಪ್ರಕರಣಗಳು ದಾಖಲಾಗಿವೆ. ದಾಸ್ನಾ ದೇವಿ ದೇವಸ್ಥಾನದ ಪೀಠಾಧಿಪತಿ ಯತಿ ನರಸಿಂಹಾನಂದ ಮಹರಾಜ್ ಅವರನ್ನು ಬಂಧಿಸಲಾಗಿದ್ದು, ಅವರನ್ನು ಗಾಜಿಯಾಬಾದ್ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಉದ್ವಗ್ನ ವಾತಾವರಣವಿರುವ ಕಾರಣ ಗಾಜಿಯಾಬಾದ್​, ಬುಲಂದ್​ಶಹರ್, ಆಲಿಗಢ ಮತ್ತು ಇತರ ಸೂಕ್ಷ್ಮ ನಗರಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಜಿಯಾಬಾದ್‌ನ ಲೋಹಿಯಾ ನಗರದ ಹಿಂದಿ ಭವನದಲ್ಲಿ ಸೆಪ್ಟೆಂಬರ್ 29 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಆಕ್ಷೇಪಾರ್ಹ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಮಹಂತ್ ಯತಿ ನರಸಿಂಹಾನಂದ ಸರಸ್ವತಿ ವಿರುದ್ಧ ಗುರುವಾರ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ. ಮುಸ್ಲಿಂ ಸಮುದಾಯದ ಜನರ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಿಹಾನಿ ಗೇಟ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ತ್ರಿವೇಂದ್ರ ಸಿಂಗ್ ಅವರ ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಿಹಾನಿ ಗೇಟ್‌ನ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಸಚಿನ್ ಕುಮಾರ್, ‘ವೈರಲ್ ವಿಡಿಯೋ ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ. ವಿಡಿಯೋವನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರವೇ ಕ್ರಮ ಕೈಗೊಳ್ಳಲಾಗುವುದು.

ನರಸಿಂಹಾನಂದ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಉತ್ತರಾಖಂಡ ಘಟಕ ಶುಕ್ರವಾರ ಕರೆ ನೀಡಿತ್ತು. ಎಐಎಂಐಎಂನ ಉತ್ತರಾಖಂಡದ ಅಧ್ಯಕ್ಷ ನಯ್ಯರ್ ಕಾಜ್ಮಿ, “ಯತಿ ನರಸಿಂಗಾನಂದರು ಪ್ರವಾದಿಯನ್ನು ಪದೇ ಪದೇ ಅವಮಾನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Maharashtra | ಕಾಂಗ್ರೆಸ್ ಪಕ್ಷವನ್ನು ನಗರ ನಕ್ಸಲರ ಗುಂಪು ನಡೆಸುತ್ತಿದೆ: ಪ್ರಧಾನಿ ಮೋದಿ ಆರೋಪ

Share This Article

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…

ಕಣ್ಣಿನಪೊರೆ ಸಮಸ್ಯೆಗೆ ಪರಿಹಾರ ಏನೆಂದು ಆಲೋಚಿಸುತ್ತಿದ್ದೀರಾ?; ಇಲ್ಲಿದೆ ಸೂಕ್ತ ಮನೆಮದ್ದಿನ ಮಾಹಿತಿ | Health Tips

ಪ್ರಸ್ತುತ ಕಾರ್ಯನಿರತ ಜೀವನ ಮತ್ತು ಕಳಪೆ ಜೀವನಶೈಲಿಯಿಂದಾಗಿ ಅನೇಕ ಸಮಸ್ಯೆಗಳು ಉದ್ಭವಿಸುತ್ತಿವೆ. ಅದರಲ್ಲಿನ ಪ್ರಮುಖ ಸಮಸ್ಯೆಗಳಲ್ಲಿ…