ಜೆಡಿಎಸ್ ಜಿಲ್ಲಾಧ್ಯಕ್ಷರ ಕಾರು ಹಾಗೂ ಟ್ಯಾಂಕರ್ ನಡುವೆ ಅಪಘಾತ; ಮೂವರು ಗಂಭೀರ

Accident
Published on

ಉತ್ತರ ಕನ್ನಡ: ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಅವರ ಕಾರು ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ತೀವ್ರತೆಗೆ ಉತ್ತರ ಕನ್ನಡ ಜೆಡಿಎಸ್ ಘಟಕದ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕುಮಟಾ ತಾಲೂಕಿನ ಹಿರೇಗುತ್ತಿ ಎಂಬಲ್ಲಿ ಅಪಘಾತ ಸಂಭವಿಸಿದೆ. ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ, ವಿ.ಎಂ ಭಂಡಾರಿ, ಪರಮೇಶ್ವರ ನಾಯ್ಕ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅಂಕೋಲಾದಿಂದ ಹೊನ್ನಾವರ ಕಡೆ ಪ್ರಯಾಣಿಸುತ್ತಿದ್ದರು.

ಗಾಯಾಳುಗಳನ್ನು ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net