

ಡೆಹ್ರಾಡೂನ್: ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ಭಾರೀ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಈ ನಡುವೆ ಅನಾಹುತಗಳು ಹೆಚ್ಚಾಗುತ್ತಲೇ ಇವೆ. ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿದ್ದರೆ, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.
ಉತ್ತರಾಖಂಡದಲ್ಲೂ ಭಾರೀ ಮಳೆಯಾಗುತ್ತಿದ್ದು, ಇಲ್ಲಿನ ಧ್ಹೇಲಾ ನದಿಯ ನೀರಿನ ರಭಸಕ್ಕೆ ಕಾರು ಕೊಚ್ಚಿ ಹೋಗಿದ್ದು, 9 ಮಂದಿ ಮೃತಪಟ್ಟಿದ್ದಾರೆ. ಓರ್ವ ಬಾಲಕಿ ಬದುಕುಳಿದಿದ್ದಾಳೆ.
ಘಟನೆಯಲ್ಲಿ 9 ಮಂದಿ ಮೃತಪಟ್ಟಿದ್ದು, ಬಾಲಕಿಯನ್ನು ರಕ್ಷಿಸಲಾಗಿದೆ. ತೀವ್ರ ಮಳೆಯಿಂದಾಗಿ ಶುಕ್ರವಾರ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದೆ ಎಂದು ಕುಮೌನ್ ವಲಯದ ಡಿಐಜಿ ಆನಂದ್ ಭರನ್ ತಿಳಿಸಿದ್ದಾರೆ.
ಈ ಮಧ್ಯೆ ಉತ್ತರಾಖಂಡದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ ವ್ಯಕ್ತಿ ಬುಧವಾರ ನೀರಿನಲ್ಲಿ ಕೊಚ್ಚಿಹೋದ ಘಟನೆಯೂ ವರದಿಯಾಗಿದೆ. (ಏಜೆನ್ಸೀಸ್)