More

    ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ 41 ಕಾರ್ಮಿಕರಿಗೆ ತಲಾ ಒಂದು ಲಕ್ಷ ರೂ.ಆರ್ಥಿಕ ನೆರವು ಘೋಷಿಸಿದ ಸಿಎಂ ಧಾಮಿ

    ಉತ್ತರಕಾಶಿ: ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ ಎಲ್ಲ ಕಾರ್ಮಿಕರಿಗೆ ಸರ್ಕಾರ 1 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದರು. ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಇದಲ್ಲದೇ ಮನೆಗೆ ತೆರಳುವವರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಂಪೂರ್ಣ ವ್ಯವಸ್ಥೆ ಕಲ್ಪಿಸಲಾಗುವುದು.

    ಸುರಂಗದಲ್ಲಿ ಸಿಲುಕಿದ್ದ ಎಲ್ಲ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಿಲ್ಕ್ಯಾರಾದಲ್ಲಿ ತಿಳಿಸಿದ್ದಾರೆ. ಆಸ್ಪತ್ರೆಯ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇವುಗಳ ಜೊತೆಗೆ ಕುಟುಂಬ ಸದಸ್ಯರು ಮತ್ತು ಕಾರ್ಮಿಕರಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ಸಹ ಸರ್ಕಾರ ಮಾಡುತ್ತಿದೆ. ಕಾರ್ಮಿಕರು ಆರೋಗ್ಯವಂತರಾದ ಬಳಿಕ ಸರಕಾರದಿಂದ 1 ಲಕ್ಷ ರೂ.ಗಳ ಚೆಕ್ ಗಳನ್ನು ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಇದಲ್ಲದೇ ಮನೆಗೆ ತೆರಳುವ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.

    ಬಾಬಾ ಬೌಖ್ನಾಗ್ ಮತ್ತು ದೇವಭೂಮಿಯ ದೇವರು ಮತ್ತು ದೇವತೆಗಳ ಕೃಪೆಯಿಂದಾಗಿ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಲ್ಕ್ಯಾರಾದಲ್ಲಿ ಬೌಖ್‌ನಾಗ್ ದೇವರ ಭವ್ಯ ದೇವಾಲಯವನ್ನು ನಿರ್ಮಿಸಲಾಗುವುದು. ಈ ಕುರಿತು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ. ಬಾಬಾ ಬೌಖ್ನಾಗ್ ಅವರ ಆಶೀರ್ವಾದದಿಂದ ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಬಾಬಾ ಬೌಖ್‌ನಾಗ್‌ನ ದೇವಸ್ಥಾನವನ್ನು ನಿರ್ಮಿಸಲು ಗ್ರಾಮಸ್ಥರು ಬೇಡಿಕೆ ಇಟ್ಟಿದ್ದಾರೆ. ಈ ಬೇಡಿಕೆಯನ್ನು ಸರ್ಕಾರ ಈಡೇರಿಸಲಿದೆ. ಇದಕ್ಕಾಗಿ ಮಂದಿರ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಆರಂಭಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. 

    ಮೊದಲ 5 ದಿನ… ಸುರಂಗದಿಂದ ಸುರಕ್ಷಿತವಾಗಿ ಹೊರಬಂದ ಹಿಮಾಚಲ ಪ್ರದೇಶದ ಕಾರ್ಮಿಕ ಹೇಳಿದ್ದಿಷ್ಟು….

    ಉತ್ತರಕಾಶಿ ಸುರಂಗ ದುರಂತ: ರಕ್ಷಣಾ ಕಾರ್ಯಾಚರಣೆಯಲ್ಲಿ ಇವರದ್ದೇ ಪ್ರಮುಖ ಪಾತ್ರ! ಯಾರು ಈ ಅರ್ನಾಲ್ಡ್ ಡಿಕ್ಸ್?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts