ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ; ನಾಲ್ವರು ಸಾವು, 50ಕ್ಕೂ ಹೆಚ್ಚು ಮಂದಿ ನಾಪತ್ತೆ | Uttarkashi

ವಿಜಯವಾಣಿ (11)
Published on

Uttarkashi: ಉತ್ತರಾಖಂಡದ ಉತ್ತರಕಾಶಿಯ ಧರಾಲಿಯಲ್ಲಿ ಭಾರೀ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹದ ಭೀಕರತೆ ದೃಶ್ಯಗಳಲ್ಲಿ ಸೆರೆಯಾಗಿವೆ. ಮೇಘಸ್ಫೋಟಕ್ಕೆ ಐವರು ಬಲಿಯಾಗಿದ್ದು, 50ಕ್ಕೂ ಅಧಿಕ ಮಂದಿ ಕಾಣೆಯಾಗಿದ್ದಾರೆ.

ದುರಂತದಲ್ಲಿ ಹಲವರು ಕೊಚ್ಚಿಹೋದ ಶಂಕೆ ವ್ಯಕ್ತವಾಗಿದೆ. ಬೆಟ್ಟದಿಂದ ನುಗ್ಗಿದ ನೀರು, ರಭಸದಲ್ಲಿ ನೂರಾರು ಮನೆಗಳ ಸಮೇತ ಕೊಚ್ಚಿಕೊಂಡು ಹೋಗಿದೆ. ಪ್ರವಾಹದಲ್ಲಿ ಸಿಲುಕಿದ ಸ್ಥಳೀಯರು, ಸಹಾಯಕ್ಕಾಗಿ ಚೀರಾಡುತ್ತಿರುವ ಭಯಾನಕ ದೃಶ್ಯಗಳು ಜಾಲತಾಣಗಳಲ್ಲಿ ಹರಿದಾಡಿವೆ. ಹಠಾತ್​ ಪ್ರವಾಹದಿಂದ ಜನರ ಆಸ್ತಿಪಾಸ್ತಿಗಳು ಹಾನಿಯಾಗಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಇಂದು ಮಧ್ಯಾಹ್ನ 1:45ರ ಸುಮಾರಿಗೆ ಭಾರತೀಯ ಸೇನಾ ಶಿಬಿರದಿಂದ ಸುಮಾರು 4 ಕಿಮೀ ದೂರದಲ್ಲಿರುವ ಉತ್ತರಕಾಶಿಯ ಧರಾಲಿ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿ, ಭಾರಿ ಭೂಕುಸಿತ ಸಂಭವಿಸಿದೆ. ಸ್ಥಳೀಯ ಹೋಟೆಲ್​ಗಳು ಮತ್ತು ಮಾರುಕಟ್ಟೆಗಳು ಪ್ರವಾಹದ ಭೀಕರತೆಗೆ ಸಂಪೂರ್ಣವಾಗಿ ಕೊಚ್ಚಿಹೋಗಿವೆ. ಎಸ್​ಡಿಆರ್​ಎಫ್​, ಭಾರತೀಯ ಸೇನೆ, ಪೊಲೀಸರು ಮತ್ತು ರಕ್ಷಣಾ ಪಡೆಗಳು ಸ್ಥಳಕ್ಕೆ ಆಗಮಿಸಿ, ಅವಶೇಷಗಳ ಅಡಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net