More

    ‘ಉತ್ಥಾನ’ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆ–2022ರ ಫಲಿತಾಂಶ ಪ್ರಕಟ: ವಿಜೇತರ ವಿವರ ಇಲ್ಲಿದೆ..

    ಬೆಂಗಳೂರು: ‘ಉತ್ಥಾನ’ ಮಾಸಪತ್ರಿಕೆಯು ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ವಿಜೇತ ವಿದ್ಯಾರ್ಥಿಗಳ ವಿವರವನ್ನು ಪ್ರಕಟಿಸಿದೆ.

    ಉತ್ಥಾನ ಏಳು ವರ್ಷಗಳಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಆಯೋಜಿಸುತ್ತಿದ್ದು, ಈ ವರ್ಷ ‘ಭವಿಷ್ಯದಲ್ಲಿ ನಾನೇನಾಗಬೇಕು?: ಉದ್ಯೋಗದಾತನಾಗಲೇ? ಉದ್ಯೋಗಿಯಾಗಲೇ?’ ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿತ್ತು.

    ‘ಉತ್ಥಾನ’ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆ–2022ರಲ್ಲಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿದ್ಯಾರ್ಥಿ ದರ್ಶನ್ ಎಸ್.ಎನ್. ಪ್ರಥಮ ಬಹುಮಾನಕ್ಕೆ ಪಾತ್ರರಾಗಿದ್ದಾರೆ. ಪ್ರಥಮ ಸ್ಥಾನ ಗಳಿಸಿದ ದರ್ಶನ್​ 10 ಸಾವಿರ ರೂ. ನಗದು ಬಹುಮಾನಕ್ಕೆ ಭಾಜನರಾಗಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ರಾಮಕುಂಜದ ಶ್ರೀ ರಾಮಕುಂಜೇಶ್ವರ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿನಿ ಶ್ರದ್ಧಾ ಯು.ಎಸ್. ದ್ವಿತೀಯ ಬಹುಮಾನ (ರೂ. 7,000) ಹಾಗೂ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿ ಡಾ. ಶಿಶಿರ ರಾನಡೆ ತೃತೀಯ ಬಹುಮಾನ (ರೂ. 5,000) ಪಡೆದಿದ್ದಾರೆ.

    ಜೊತೆಗೆ ಹತ್ತು ಮಂದಿ ವಿದ್ಯಾರ್ಥಿಗಳು ಸಮಾಧಾನಕರ ಬಹುಮಾನ (ತಲಾ ರೂ. 2,000) ಪಡೆದಿದ್ದಾರೆ. ದಾವಣಗೆರೆಯ ಹರಿಹರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎಸ್ಸಿ ವಿದ್ಯಾರ್ಥಿನಿ ಲಕ್ಷ್ಮಿ ಎಂ.ಪಿ., ಯಾದಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಿ.ಕಾಂ. ವಿದ್ಯಾರ್ಥಿನಿ ಸುವರ್ಣ ಎಸ್., ಬೆಂಗಳೂರು ವಿಶ್ವವಿದ್ಯಾನಿಲಯದ (ಜ್ಞಾನಭಾರತಿ ಕ್ಯಾಂಪಸ್) ಎಂ.ಎಸ್ಸಿ. ವಿದ್ಯಾರ್ಥಿನಿ ಮಂಜುಳಾ ಎಚ್., ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಪ್ರಥಮದರ್ಜೆ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿನಿ ಶ್ರೇಯಾ ಪೂಜಾರಿ, ಹೊನ್ನಾಳಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜು ಬಿ.ಎ. ವಿದ್ಯಾರ್ಥಿ ಆಂಜನೇಯ ಎಚ್.ಎಸ್., ತುಮಕೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿನಿ ಮಮತಾ ಎಚ್.ಜಿ., ಉಜಿರೆಯ ಎಸ್‍ಡಿಎಂ ಕಾಲೇಜಿನ ಬಿ.ಎ. ವಿದ್ಯಾರ್ಥಿ ತುಷಾರ್ ಹೆಗಡೆ, ಭಟ್ಕಳದ ಶ್ರೀ ಗುರುಸುಧೀಂದ್ರ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿನಿ ಮೇಧಾ ಬಾಲಕೃಷ್ಣ ಶೆಟ್ಟಿ , ಪುತ್ತೂರು ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಖದೀಜತ್ ದಿಲ್ಶಾನ ಹಾಗೂ ಬೆಂಗಳೂರಿನ ಬಿಎಂಎಸ್ ಮಹಿಳಾ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿನಿ ನಯನ ಎಸ್. ಸಮಾಧಾನಕರ ಬಹುಮಾನ ಪಡೆದವರು.

    ತೀರ್ಪುಗಾರರು: ಕೃಷಿಕರು ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಗುರುರಾಜ ಗಂಟಿಹೊಳೆ, ಕೊಪ್ಪಳದ ಗಂಗಾವತಿಯ ಎಸ್‍ಎಂಎನ್‍ಎಂ ಬಾಲಕಿಯರ ಸ.ಪ.ಪೂ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಸೋಮಕ್ಕ ಎಂ. ಹಾಗೂ ಶಿವಮೊಗ್ಗದ ಖ್ಯಾತ ಕೀಲು ಮತ್ತು ಮೂಳೆ ತಜ್ಞ ಡಾ. ಸುಧೀಂದ್ರ ಪಿ.ಆರ್. ತೀರ್ಪುಗಾರರಾಗಿ ಬಹುಮಾನಿತ ಪ್ರಬಂಧಗಳನ್ನು ಆಯ್ಕೆ ಮಾಡಿದ್ದರು ಎಂದು ಉತ್ಥಾನದ ಪ್ರಧಾನ ಸಂಪಾದಕ ಎಸ್.ಆರ್. ರಾಮಸ್ವಾಮಿ ತಿಳಿಸಿದ್ದಾರೆ.

    ‘ಸತ್ತು ಹೋದವ’ ಸತ್ತ ಮರುದಿನವೇ ತಾನು ಮೃತಪಟ್ಟಿದ್ದ ಆ ಸ್ಥಳದಲ್ಲೇ ಮತ್ತೆ ಕಾಣಿಸಿಕೊಂಡಿದ್ದ!; ಆಗಿದ್ದಾದರೂ ಏನು, ಏಕೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts