More

    ನಾವ್ಯಾರೂ ಪಕ್ಷಕ್ಕೆ ಅನಿವಾರ್ಯ ಅಲ್ಲ: ಮಾಜಿ ಸಚಿವ ವಿ.ಸೋಮಣ್ಣ

    ತುಮಕೂರು: ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಎರಡರಲ್ಲೂ ಪರಾಜಯಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಸೋಲಿನ ಕುರಿತಂತೆ ಸುದ್ದಿಗಾರರಿಗೆ ಇಂದು ಪ್ರತಿಕ್ರಿಯೆ ನೀಡಿದರು. ಇಂದು ನೊಣವಿನಕೆರೆ ಕಾಡುಸಿದ್ದೇಶ್ವರ ಮಠಕ್ಕೆಭೇಟಿ ನೀಡಿದ ಅವರು ಈ ವಿಷಯ ತಿಳಿಸಿದರು.

    ನಾನು ಚುನಾವಣೆಯಲ್ಲಿ ಸೋತಿದ್ದೇನೆ. ಜನರ ತೀರ್ಪನ್ನು ಸ್ವೀಕರಿಸಿದ್ದೇನೆ. ಸೋಲಿಗೆ ಕಾರಣ ಇನ್ನೇನೂ ಇಲ್ಲ. ಕಳೆದ ಬಾರಿ ಕಾಂಗ್ರೆಸ್ ಸೋತಿತ್ತು. ಸಿಎಂ ಆಗಿದ್ದರೂ ಸಿದ್ದರಾಮಯ್ಯ ಸೋತಿದ್ದರು. ಇದೆಲ್ಲ ನಡೆಯುತ್ತ ಇರುತ್ತದೆ ಎಂದು ಹೇಳಿದರು.

    ಇದನ್ನೂ ಓದಿ: ದೃಷ್ಟಿ ಇಲ್ಲದಿದ್ರೂ ಶಾಲೆಗೇ ಸಿಬಿಎಸ್​ಇ ಟಾಪರ್​: ಆ್ಯಸಿಡ್​ ದಾಳಿಗೆ ಎರಡೂ ಕಣ್ಣು ಕಳೆದುಕೊಂಡ್ರೂ ಹೋಪ್ ಕಳ್ಕೊಂಡಿಲ್ಲ!

    ಇಂದಿರಾ ಗಾಂಧಿ, ರಾಜೀವ್ ಗಾಂಧಿ, ವಾಜಪೇಯಿ ಇವರ್ಯಾರೂ ಇಲ್ಲ. ಆದರೂ ಪಕ್ಷಗಳಿಲ್ವಾ? ಎಂದ ಅವರು, ಯಡಿಯೂರಪ್ಪ ಪ್ರಶ್ನಾತೀತ ನಾಯಕರು. ನಾನಾಗಲಿ, ಯಡಿಯೂರಪ್ಪನವರಾಗಲಿ ಕೆಲವೊಮ್ಮೆ ಅನಿವಾರ್ಯ ಅಲ್ಲ. ವ್ಯಕ್ತಿಗಿಂತ ಪಕ್ಷಮುಖ್ಯ, ನಾವ್ಯಾರೂ ಪಕ್ಷಕ್ಕೆ ಅನಿವಾರ್ಯ ಅಲ್ಲ ಎಂದು ಹೇಳಿದರು.

    ಇದನ್ನೂ ಓದಿ: ವಾಟ್ಸ್ಆ್ಯಪ್ ಮೂಲಕ ವಂಚನೆ; ಸುರಕ್ಷತೆಗಾಗಿ ನೀವು ಮಾಡಬೇಕಾದ್ದೇನು?

    ಯಡಿಯೂರಪ್ಪ ಅವರನ್ನು ಇಳಿಸಿದ್ದಕ್ಕೆ ಲಿಂಗಾಯತರು ಬಿಜೆಪಿಯನ್ನು ಸೋಲಿಸಿದರು ಎನ್ನುವುದು ಸರಿಯಲ್ಲ. ಲಿಂಗಾಯತರನ್ನೇ ಯಾಕೆ ಟಾರ್ಗೆಟ್ ಮಾಡ್ತೀರಾ? ಲಿಂಗಾಯತರು ಸ್ವತಂತ್ರವಾಗಿ ಬದುಕುವುದು ಬೇಡವಾ? ಎಂದೂ ಪ್ರಶ್ನಿಸಿದರು.

    ಇದನ್ನೂ ಓದಿ: ಸ್ಮಶಾನದಲ್ಲಿ ಹುಡುಗಿಯರ ಫೋಟೋಗಳಿಗೆ ಮಾಟ-ಮಂತ್ರ; ಮಧ್ಯರಾತ್ರಿ ಬೆತ್ತಲೆಯಾಗಿ ವಾಮಾಚಾರ; ಮಹಿಳೆಯೂ ಭಾಗಿ!

    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ನೊಣವಿನಕೆರೆ ಮಠಕ್ಕೆ ಭೇಟಿ ನೀಡಿದ್ದರ ಕುರಿತು ಪ್ರತಿಕ್ರಿಯಿಸಿದ ಸೋಮಣ್ಣ, ನಾನು ನೋಣವಿನಕೆರೆ ಮಠದ ಭಕ್ತ, ಅದಕ್ಕೆ ಬಂದು ಪೂಜೆ ಮಾಡಿದ್ದೇನೆ. ಡಿ.ಕೆ.ಶಿವಕುಮಾರ್​ ಕೂಡ ಒಬ್ಬ ಭಕ್ತ, ಅವರೂ ಪೂಜೆ ಮಾಡಿದ್ದಾರೆ. ಅವರ ಭೇಟಿಗೂ ನನ್ನ ಭೇಟಿಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದರು.

    ಇನ್ನು ಕಾರ್ಪೋರೇಟ್ ಕಚೇರಿಗಳಲ್ಲೂ ಬಾರ್!; ಅಬಕಾರಿ ನೀತಿಯಲ್ಲೇ ಅವಕಾಶ: ಎಲ್ಲಿ, ಷರತ್ತುಗಳೇನು?

    ಸೊಳ್ಳೆ ಕಡಿತದಿಂದ ಪುತ್ರನ ಸಾವು, ವಿಮೆ ಹಣಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ ತಾಯಿ: ಆಮೇಲೇನಾಯ್ತು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts