More

  ಜಲಶಕ್ತಿ ಖಾತೆ ಮತ್ತು ರೈಲ್ವೆ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ವಿ.ಸೋಮಣ್ಣ!

  ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕ್ಯಾಬಿನೆಟ್ ದರ್ಜೆ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು.

  ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಕೇಸ್‌: ಕೆಲ ಹೊತ್ತಲ್ಲೇ ಕೋರ್ಟ್​ ಮುಂದೆ ನಟ ದರ್ಶನ್​, ಪವಿತ್ರಾ ಗೌಡ!

  ಜಲಶಕ್ತಿ ಖಾತೆ ಮತ್ತು ರೈಲ್ವೆ ಖಾತೆ (ರಾಜ್ಯ ದರ್ಜೆ) ಹೊಣೆ ಹೊತ್ತಿರುವ ಸೋಮಣ್ಣ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

  ಜಗದ್ಗುರು ಬಸವಣ್ಣನವರ “ಕಾಯಕವೇ ಕೈಲಾಸ”ನುಡಿಮುತ್ತಿನಂತೆ, ನನ್ನ ಪೂಜ್ಯರಾದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳವರು ಹಾಗೂ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಆಶೀರ್ವಾದದೊಂದಿಗೆ, ದೆಹಲಿಯ ರೈಲ್ವೆ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅಧಿಕಾರದ ಜವಾಬ್ದಾರಿ ವಹಿಸಿಕೊಳ್ಳಲಾಯಿತು ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಟ್ಟೀಟ್​ ಮಾಡಿದ್ದಾರೆ.

  ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಜಿ.ಎಸ್‌ ಬಸವರಾಜು, ಮಾಜಿ ಸಂಸದ ಉಮೇಶ್‌ ಜಾದವ್‌, ಬಾಗಲಕೋಟೆಯ ಸಂಸದ ಪಿ.ಸಿ ಗದ್ದಿಗೌಡ ಹಾಗೂ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು ಇದ್ದರು.

  ನರೇಂದ್ರ ಮೋದಿ ಪ್ರಧಾನಿಯಾಗಿ ಮೂರನೇ ಬಾರಿ ಅಧಿಕಾರ ಸ್ವೀಕಾರ ಮಾಡಿದರು. ಇನ್ನು ಮೋದಿ ಜೊತೆ ಕರ್ನಾಟಕದ ನಾಲ್ವರು ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಕರ್ನಾಟಕದಿಂದ ಎಚ್‌ಡಿ ಕುಮಾರಸ್ವಾಮಿ, ಪ್ರಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ, ವಿ ಸೋಮಣ್ಣ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ.

  ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌:  ಸಿಬಿಐ ತನಿಖೆಗೆ ಒತ್ತಾಯ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts